November 9, 2024
WhatsApp Image 2024-09-16 at 9.29.36 PM

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ.

ಮೃತರನ್ನು ಅರ್ಚನಾ ಕಾಮತ್‌ (34) ಎಂದು ಗುರುತಿಸಲಾಗಿದೆ. ಯಕೃತ್ತಿಗೆ ಸಂಬಂಧಿಸಿದ ಖಾಯಿಲೆಯಿಂದ ಬಳಲುತ್ತಿದ್ದ ತಮ್ಮ ಸಂಬಂಧಿಕರೊಬ್ಬರಿಗೆ ಯಕೃತ್ತಿನ ಕಸಿಗೆ ತನ್ನ ಯಕೃತ್ತನ್ನು ದಾನ ಮಾಡಿದ್ದರು.  ಈ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.  ಚಿಕಿತ್ಸೆ ವೇಳೆ ಸೊಂಕಿಗೆ ತುತ್ತಾಗಿದ್ದರು ಎಂದು ಹೇಳಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.ಸದಾ ಸಮಾಜಮುಖಿ ಚಿಂತನೆಯೊಂದಿಗೆ ಅರ್ಚನಾ ಕಾಮತ್‌ ಸಕ್ರಿಯವಾಗಿದ್ದು ಗುರುತಿಸಿಕೊಂಡಿದ್ದರು. ಅವರ ಅಕಾಲಿಕ ನಿಧನದ ಸುದ್ದಿ ಇಡೀ ಸಮಾಜವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಸಂಬಂಧಿಕರು, ಆತ್ಮೀಯರು ಆಘಾತಕಾರಿ ಸುದ್ದಿ ತಿಳಿದು ಕಂಬನಿ ಮಿಡಿದಿದ್ದಾರೆ. ಮೃತರು ಪತಿ ಸಿಎ ಚೇತನ ಕಾಮತ್, 4 ವರ್ಷದ ಮಗು, ತಂದೆ, ತಾಯಿಯನ್ನು ಅಗಲಿದ್ದಾರೆ. ಅರ್ಚನಾ ಕಾಮತ್ ಅವರ ಸಾವಿಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ನಾಯಕರು ಕಂಬನಿ ಮಿಡಿದಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.