ಉಡುಪಿ: ಬೆಡ್ ಶೀಟ್ ಮಾರುವ ನೆಪದಲ್ಲಿ ಮನೆಗೆ ನುಗ್ಗಿದ ಅಪರಿಚಿತ : ದೂರು ದಾಖಲು

ಉಡುಪಿ: ಬೆಡ್ ಶೀಟ್ ಮಾರುವ ನೆಪದಲ್ಲಿ ಅಪರಿಚಿತ ವ್ಯಕ್ತಿ ವೃದ್ಧೆಯೊಬ್ಬರ ಮನೆಗೆ ನುಗ್ಗಿರುವ ಘಟನೆ ಉಡುಪಿಯ ಅಂಬಲಪಾಡಿ ಸಮೀಪದ ನಡೆದಿದೆ. ದುಬೈನಲ್ಲಿ ಪ್ರವೀಣ್ ಎಂಬವರು ಕೆಲಸ ಮಾಡಿಕೊಂಡಿದ್ದು, ಅವರ ತಾಯಿ ವಿನೋದಿನಿ (82ವರ್ಷ) ಉಡುಪಿಯ ಅಂಬಲಪಾಡಿಯ ಶ್ಯಾಮ್ ಸದನದಲ್ಲಿ ಒಬ್ಬರೇ ವಾಸವಾಗಿದ್ದರು ಎನ್ನಲಾಗಿದೆ. ಯಾರೋ ಅಪರಿಚಿತ ವ್ಯಕ್ತಿ ಬೆಡ್ ಶೀಟ್ ಮಾರುವ ನೆಪದಲ್ಲಿ ವಿನೋದಿನಿ ಅವರ ರೂಂ ಪ್ರವೇಶಿಸಿ ಬೆಡ್ ಶೀಟ್ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದ. ಇದನ್ನು ಗಮನಿಸಿದ ಮನೆಯ ಕೇರ್ ಟೇಕರ್ ತುಳಜಾ ಎಂಬವರು ಪ್ಲಂಬಿಂಗ್ ಕೆಲಸಕ್ಕೆ ಬಂದಿದ್ದ ಪ್ರಶಾಂತ್ ಅವರನ್ನು ಕರೆದುಕೊಂಡು ಬರುವಷ್ಟರಲ್ಲಿ ಅಪರಿಚಿತ ವ್ಯಕ್ತಿ ಮನೆಯಿಂದ ಹೊರಬಂದು ಕಾರಿನಲ್ಲಿ ಪರಾರಿಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಪ್ರವೀಣ್ ಸ್ನೇಹಿತ ಕಿರಣ್ ಕುಮಾರ್ ಅವರು ಘಟನೆಯ ಬಗ್ಗೆ ಉಡುಪಿ ನಗರ ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿರುವುದಾಗಿ ವರದಿಯಾಗಿದೆ.

Check Also

ಕಾರ್ಕಳ : ಶಾಲೆಯಲ್ಲಿ ಈದ್‌ ಮಿಲಾದ್‌ ಆಚಣೆ- ಪೋಷಕರಿಂದ ಆಕ್ರೋಶ

ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್‌ ಮಿಲಾದ್‌ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇಪ ವ್ಯಕ್ತವಾಗಿದೆ. ಸಚ್ಚರಿಷೇಟೆಯ …

Leave a Reply

Your email address will not be published. Required fields are marked *

You cannot copy content of this page.