ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅ.15ರವರೆಗೆ ಅವಕಾಶ!

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್-ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮನಾಂತರ(PUC & Equivalent Courses), ಸಾಮಾನ್ಯ ಪದವಿ(General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Courses) ಈ ಕೋರ್ಸ್ ಗಳಿಗೆ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ಮರುಪಾವತಿ”, ಮತ್ತು “ವಿದ್ಯಾಸಿರಿ(“ಊಟ ಮತ್ತು ವಸತಿ ಸಹಾಯ ಯೋಜನೆ”), ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 

ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು ಅರ್ಜಿ ಸಲ್ಲಿಸಲು ಅಕ್ಟೊಬರ್ 15 ರವರೆಗೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ, ವಿದ್ಯಾರ್ಥಿಗಳು ಆನ್ಲೈನ್ ಮೂಲಕ https://ssp.postmatric.karnataka.gov.in/ ಈ ವೆಬ್ ಸೈಟ್ನಲ್ಲಿ ಅರ್ಜಿಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್ ಸೈಟ್ ವಿಳಾಸ- https://bcwd.karnataka.gov.in ಇಲಾಖಾ ಸಹಾಯವಾಣಿ ಸಂಖ್ಯೆ:8050770005 ಇಮೇಲ್: bcwdhelpline@gmail.com ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in ಸಹಾಯವಾಣಿ ಸಂಖ್ಯೆ: 1902 ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಜಿಲ್ಲಾ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Check Also

ಮುಸ್ಲಿಮರೇ ಇಲ್ಲದ ದೇಶಗಳಿವು : ಜಗತ್ತಿನ ಈ ರಾಷ್ಟ್ರಗಳಲ್ಲಿ ಮಸೀದಿಗಳೂ ಇಲ್ಲ!

ನವದೆಹಲಿ : ಪ್ರಪಂಚದಾದ್ಯಂತದ ಅನೇಕ ದೇಶಗಳಲ್ಲಿ, ಹಿಂದೂಗಳು, ಮುಸ್ಲಿಮರು, ಬೌದ್ಧರು, ಕ್ರಿಶ್ಚಿಯನ್ನರು, ಸಿಖ್ಖರು ಮತ್ತು ಇತರರನ್ನು ಒಳಗೊಂಡಂತೆ ವಿವಿಧ ಧರ್ಮಗಳ …

Leave a Reply

Your email address will not be published. Required fields are marked *

You cannot copy content of this page.