ಕೋಟ ಸ್ಥಾನಕ್ಕೆ ಪ್ರಮೋದ್ ಮಧ್ವರಾಜ್, ಕಟೀಲ್ ಹೆಸರು ರೇಸ್ ನಲ್ಲಿ…!!

ಮಂಗಳೂರು : ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಸುವ ವಿಧಾನ ಪರಿಷತ್‌ ಸ್ಥಾನದ ಮರು ಚುನಾವಣೆ ಅಕ್ಟೋಬರ್ 21 ರಂದು ನಿಗದಿಯಾಗಿದ್ದು ಬಿಜೆಪಿ- ಜೆಡಿಎಸ್‌ ಮ್ರೈತ್ರಿ ಅಭ್ಯರ್ಥಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಯಾರೆನ್ನುವ ಕುತೂಹಲ ಗರಿಗೆದರಿದೆ. ಬಿಜೆಪಿಯಲ್ಲಿ ಟಿಕೆಟ್‌ಗಾಗಿ ಆಕಾಂಕ್ಷಿಗಳ ಬಿರುಸಿನ ಚಟುವಟಿಕೆ ಆರಂಭವಾಗಿದ್ದರೆ, ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಕುರಿತು ಲೆಕ್ಕಾಚಾರ ನಡೆಯುತ್ತಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾ.ಪಂ. ಗಳಲ್ಲಿ6,037 ಮಂದಿ ಅರ್ಹ ಮತದಾರರಿದ್ದಾರೆ. ಇನ್ನು ಬಿಜೆಪಿಯಲ್ಲಿ ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಬಿಜೆಪಿ ಉಡುಪಿ ಜಿಲ್ಲಾಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕೆ.ಉದಯ ಕುಮಾರ್‌ ಶೆಟ್ಟಿ ಲಿಸ್ಟ್ ನಲ್ಲಿದ್ದು, ಯಾರಿಗೆ ಸಿಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಆದರೆ ಕಾಂಗ್ರೇಸ್ ನಲ್ಲಿ ಆಕಾಂಕ್ಷಿಗಳ ಪಟ್ಟಿ ಕಡಿಮೆ ಇದೆ. ಕಾಂಗ್ರೆಸ್‌ ಬೆಂಬಲಿತ ಮತಗಳ ಸಂಖ್ಯೆ ಕಡಿಮೆಯಿರುವ ಕಾರಣ ಯಾರೂ ವಿಶೇಷ ಆಸಕ್ತಿ ತೋರಿದಂತಿಲ್ಲ. ಸದ್ಯ ಕಾಂಗ್ರೆಸ್‌ ಆಕಾಂಕ್ಷಿಗಳ ಪಟ್ಟಿಯಲ್ಲಿ ಅಭಯಚಂದ್ರ ಜೈನ್‌, ವಿನಯಕುಮಾರ್‌ ಸೊರಕೆ, ಜಯಪ್ರಕಾಶ್‌ ಹೆಗ್ಡೆ ಹೆಸರುಗಳು ಕೇಳಿ ಬರುತ್ತಿದೆ.

Check Also

ಮುಸ್ಲಿಮರೇ ಇಲ್ಲದ ದೇಶಗಳಿವು : ಜಗತ್ತಿನ ಈ ರಾಷ್ಟ್ರಗಳಲ್ಲಿ ಮಸೀದಿಗಳೂ ಇಲ್ಲ!

ನವದೆಹಲಿ : ಪ್ರಪಂಚದಾದ್ಯಂತದ ಅನೇಕ ದೇಶಗಳಲ್ಲಿ, ಹಿಂದೂಗಳು, ಮುಸ್ಲಿಮರು, ಬೌದ್ಧರು, ಕ್ರಿಶ್ಚಿಯನ್ನರು, ಸಿಖ್ಖರು ಮತ್ತು ಇತರರನ್ನು ಒಳಗೊಂಡಂತೆ ವಿವಿಧ ಧರ್ಮಗಳ …

Leave a Reply

Your email address will not be published. Required fields are marked *

You cannot copy content of this page.