ಬ್ರಹ್ಮಾವರ: ಬ್ರಹ್ಮಾವರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ಸೊಂದು ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಅಸುನೀಗಿದ್ದು ದೇಹ ಛಿದ್ರ ಛದ್ರವಾಗಿ ಬಿದ್ದ ಘಟನೆ ಸಂಭವಿಸಿದೆ.
ಶೇಖರ್ ಎಂಬವರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದಾಗ ಖಾಸಗಿ ಎಕ್ಸ್ ಪ್ರೆಸ್ ಬಸ್ ಅವರಿಗೆ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅವರ ದೇಹ ಛಿದ್ರವಾಗಿ ರಸ್ತೆಯಲ್ಲಿ ಬಿದ್ದಿದೆ. ಕುಂದಾಪುರದಿಂದ ಉಡುಪಿಗೆ ಕಡೆಗೆ ಬಸ್ ಅತಿವೇಗವಾಗಿ ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ದಾರಿದೀಪ ಇಲ್ಲದೆ ಈ ಅಪಘಾತ ನಡೆದಿದೆ, ಈ ಭಾಗದ ಹೆದ್ದಾರಿಯಲ್ಲಿ ದಾರಿ ದೀಪ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ರಹ್ಮಾವರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.