March 20, 2026
WhatsApp Image 2024-09-04 at 12.19.16 PM

ಉಡುಪಿ ಜಿಲ್ಲೆಯಲ್ಲಿ ಮತ್ತೆ ಓರ್ವ ಅಕ್ರಮ ಬಾಂಗ್ಲಾ ಪ್ರಜೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಡುಪಿ ಪೊಲೀಸರು ಕಾರ್ಯಾಚರಣೆ ನಡೆಸಿ ಸಂತೆಕಟ್ಟೆಯಲ್ಲಿ ಓರ್ವನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಮೊದಲು ಮಲ್ಪೆ ಪೊಲೀಸರು ಏಳು ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದರು. ಮಲ್ಪೆ ಪ್ರಕರಣದ ತನಿಖೆಯ ಮುಂದುವರಿದ ಭಾಗವಾಗಿ ಎರಡು ದಿನಗಳ ಬಳಿಕ ಕಾರ್ಕಳದಲ್ಲಿ ಮತ್ತಿಬ್ಬರು ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧಿಸಲಾಗಿತ್ತು. ಬಂಧನಕ್ಕೊಳಗಾದ ವ್ಯಕ್ತಿಯನ್ನು ಮಹಮ್ಮದ್ ಜಹಾಂಗೀರ್ ಆಲಂ ( 24) ಎಂದು ಗುರುತಿಸಲಾಗಿದೆ. ಆತನನ್ನು  ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದಾಗಿ ಉಡುಪಿ ಎಸ್ ಪಿ ಡಾ.ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.