March 20, 2026
WhatsApp Image 2024-10-20 at 5.21.31 PM

ಕಾರ್ಕಳ : ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ ಬೈಕ್ ಮತ್ತು ಕಾರು ನಡುವೆ ಅಪಘಾತವಾಗಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.

ಗಾಯಾಳುಗಳನ್ನು ಸ್ಥಳೀಯ ಪಂಚಾಯತ್ ಸದಸ್ಯ ಅನಿಲ್ ಹಾಗೂ ಕೆಲಸದ ನಿಮಿತ್ತ ಉಡುಪಿಗೆ ಬರುತ್ತಿದ್ದ ವಿಶಯಶೆಟ್ಟಿಯವರು ತಮ್ಮ ವಾಹನದಲ್ಲಿ ಕಾರ್ಕಳದ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತವಾದ ಕೂಡಲೇ ಗಾಯಾಳುಗಳನ್ನು ತುರ್ತು ಆಸ್ಪತ್ರೆಗೆ ದಾಖಲಿಸಲು ಆ ಸಮುದಲ್ಲಿ ಬಂದ ವಾಹನ ಸವಾರರು ನಿರಾಕರಿಸಿದ್ದರಿಂದ ಸ್ಥಳೀಯ ಯುವಕರು ಆಕ್ರೋಶಗೊಂಡಿದ್ದರು. ಸಂಬಂಧಿಕರು ಕಾರ್ಕಳ ತಾಲೂಕು ಆಸ್ಪತ್ರೆಯನ್ನು ಸಂಪರ್ಕಿಸುವಂತೆ ವಿಶುಶೆಟ್ಟಿಯವರು ವಿನಂತಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.