
ಉಪ್ಪಿನಂಗಡಿ: ಶಂಕಿತ ಡೆಂಗಿ ಜ್ವರಕ್ಕೆ ತುತ್ತಾಗಿ ಮಹಿಳೆಯೊಬ್ಬರು ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಬಾಬು ಎಂಬವರ ಪತ್ನಿ ಲೀಲಾವತಿ (35) ಮೃತಪಟ್ಟವರು.
ಕೂಲಿ ಕಾರ್ಮಿಕರಾಗಿದ್ದ ಇವರಿಗೆ ನಾಲೈದು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಆರಂಭದಲ್ಲಿ ಉದನೆಯ ಕ್ಲಿನಿಕ್‌ವೊಂದರಿಂದ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೂ ಜ್ವರ ಉಲ್ಬಣಿಸಿದ ಹಿನ್ನೆಲೆಯಲ್ಲಿ ಅ.25ರಂದು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದು, ಅಲ್ಲಿಂದ ಪುತ್ತೂರು ಸರಕಾರಿ ಆಸ್ಪತ್ರೆಗೆ, ಬಳಿಕ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
