
ಪುತ್ತೂರು: ಚಿಕ್ಕಮುಟ್ನೂರು ಗ್ರಾಮದ ಸಾಲ್ಮರದಲ್ಲಿ ಮಾದಕ ಪದಾರ್ಥ ಸೇವನೆ ಮಾಡಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮಹಮ್ಮದ್ ಇಬಾಶ್ (19) ಮತ್ತು ಅಹಮ್ಮದ್ ಇಚಾಝ್ (27) ಎಂದು ಗುರುತಿಸಲಾಗಿದೆ.
ನಗರ ಪೊಲೀಸರು ರೌಂಡ್ಸ್ ನಲ್ಲಿದ್ದಾಗ ಸಾರ್ವಜನಿಕರ ಮಾಹಿತಿ ಆಧರಿಸಿ ಇಬ್ಬರನ್ನು ವಶಕ್ಕೆ ಪಡೆದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೊಳಪಡಿಸಲಾಯಿತು. ಈ ವೇಳೆ ಅವರು ಮಾದಕ ಪದಾರ್ಥ ಸೇವಿಸಿರುವುದು ದೃಢಪಟ್ಟಿತ್ತು.
