March 4, 2026
WhatsApp Image 2024-11-25 at 12.19.12 PM

ಉಡುಪಿ: ಹಿಂದೂ ಸಂಘಟನೆಗಳಿಂದ ಇಂದು ಎಸ್ಪಿ ಕಚೇರಿಯೆದುರು ಪ್ರತಿಭಟನೆ ನಡೆಯಲಿದ್ದು, ಎಸ್ ಪಿ ಕಚೇರಿ ಮುಂಭಾಗದಲ್ಲಿ ಭಾರಿ ಭದ್ರತೆ ಮಾಡಲಾಗಿದೆ. ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನಾ ಸಭೆ ಆಯೋಜನೆಗೊಂಡಿದೆ.

ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ನಿರಂತರ ದಬ್ಬಾಳಿಕೆ ಖಂಡಿಸಿ ಈ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ. ಹಿಂದೂ ಸಂಘಟನೆಗಳ ಕಾರ್ಯಕರ್ತರು, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಬ್ರಹ್ಮಗಿರಿ ಸರ್ಕಲ್ ನಿಂದ ಕಾಲ್ನಡಿಗೆ ಮೂಲಕ ಎಸ್‌ಪಿ ಕಚೇರಿ ಆವರಣದಲ್ಲಿ ಸೇರಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ ಪಿ ಕಚೇರಿ ಮುಂಭಾಗದಲ್ಲಿ ನೂರಾರು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.ಎಸ್ ಪಿ ಕಚೇರಿಗೆ ಒಳ ಪ್ರವೇಶಿಸದಂತೆ ಪೊಲೀಸರು ಬ್ಯಾರಿಕೇಡ್ ಗಳನ್ನು ಅಳವಡಿಸಿದ್ದಾರೆ.

ಇತ್ತೀಚಿಗೆ ಕಾರ್ಕಳದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

About The Author

Leave a Reply

Your email address will not be published. Required fields are marked *

You cannot copy content of this page.