
ಉಡುಪಿ : ನಗರದ ಬ್ರಹ್ಮಗಿರಿಯಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆಯು ಆರೋಪಿಸಿ ಪ್ರತಿಭಟನೆ ನಡೆಸಿತು.
ಈ ಸಂದರ್ಭ ಮಾತನಾಡಿದ ಶಾಸಕ ಸುನಿಲ್ ಕುಮಾರ್ ಉಡುಪಿಯಲ್ಲಿ ಹಿಂದು ಕಾರ್ಯಕರ್ತರ ಮೇಲೆ ಅನಗತ್ಯವಾಗಿ ಪ್ರಕರಣ ದಾಖಲಿಸಿ, ಹಿಂದೂ ಸಂಘಟನೆಗಳ ಬಲ ಕುಗ್ಗಿಸುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಖಾಕಿ ಖಾಕಿಯೇ ಆಗಿರಬೇಕು, ಕಾಂಗ್ರೆಸ್ ಆಗಬಾರದು ಎಂದು ಎಚ್ಚರಿಕೆ ನೀಡಿದರು.
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳಿ, ಕಿರಣ್ ಕುಮಾರ್ ಕೋಡ್ಗಿ, ಯಶ್ ಪಾಲ್ ಸುವರ್ಣ ಉಪಸ್ಥಿತರಿದ್ದರು.
