
ಉಡುಪಿ: ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಚಂದ್ರಶೇಖರ(34)ನಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆದೇಶಿಸಿದ್ದಾರೆ.ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 15 ವರ್ಷದ ಹಿಂದೆ ಪ್ರಕರಣ ದಾಖಲಾಗಿತ್ತು. ಬಾಲಕಿಯನ್ನು ಪರಿಚಯಿಸಿಕೊಂಡ ಆರೋಪಿ ಬಾಲಕಿ ಜತೆ ಮೊಬೈಲ್ ಸಂಪರ್ಕ ಇರಿಸಿಕೊಂಡಿದ್ದ. ಆಕೆಗೆ ಕರೆ ಮಾಡಿ ಜನವಸತಿ ಇಲ್ಲದ ಮನೆಗೆ ಮತ್ತು ಹಾಡಿಗೆ ಬರುವಂತೆ ಬೆದರಿಕೆ ಒಡ್ಡಿ ಕರೆಸಿಕೊಳ್ಳುತಿದ್ದ. ಬಾಲಕಿಯನ್ನು ಕಾಡಿಗೆ ಬರಹೇಳಿದ್ದ ಆತ ಆಕೆಯ ಜತೆ ಒತ್ತಾಯ ಪೂರ್ವಕವಾಗಿ ದೈಹಿಕ ಸಂಬಂಧ ಬೆಳೆಸಿದ್ದ. ತದನಂತರದಲ್ಲಿ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿತ್ತು.
