March 18, 2026
mangalore

ಮಂಗಳೂರು: ಈ ಬಾರಿಯ ಕರಾವಳಿ ಉತ್ಸವದ ಅಂಗವಾಗಿ ಮಂಗಳೂರಿನಲ್ಲಿ ಹೆಲಿಕಾಪ್ಟರ್ ಮೂಲಕ ಕರಾವಳಿಯ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.

ಒಬ್ಬರಿಗೆ ತಲಾ 4500 ರೂ. ವೆಚ್ಚದಲ್ಲಿ ಮಂಗಳೂರು ಪ್ರದೇಶವನ್ನು ಆಕಾಶ ಮಾರ್ಗದಲ್ಲಿ ಹೆಲಿಕಾಪ್ಟರ್ ಮೂಲಕ ಸುತ್ತ ಹಾಕಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಬೆಂಗಳೂರಿನ ತುಂಬಿ ಹೆಲಿಟೂರಿಸಂ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಹೆಲಿಕಾಪ್ಟರ್ ಮೂಲಕ ಡಿ.21ರಿಂದ 31ರವರೆಗೆ ಮೇರಿಹಿಲ್ ಹೆಲಿಪ್ಯಾಡ್ ಮೂಲಕ ಒಂದು ಬಾರಿ ಆರು ಮಂದಿ ಪ್ರಯಾಣಿಸಲು ಸಾಧ್ಯವಿರುವ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಬಹುದಾಗಿದೆ. ಈ ಕಾಪ್ಟರ್ ಮಂಗಳೂರು ಆಸುಪಾಸಿನಲ್ಲಿ ಸುಮಾರು 5ರಿಂದ 7ನಿಮಿಷಗಳ ಒಳಗೆ ಆಕಾಶದಲ್ಲಿ ಒಂದು ಪ್ರದಕ್ಷಿಣೆ ಬಂದು ಮೇರಿ ಹಿಲ್ ಗೆ ಮರಳುತ್ತದೆ.

 

About The Author

Leave a Reply

Your email address will not be published. Required fields are marked *

You cannot copy content of this page.