ನವದೆಹಲಿ : ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್(92) ಅವರು ವಯೋಸಹಜ ಕಾಯಿಲೆಯಿಂದ ಡಿ. 26ರಂದು ನಿಧರಾಗಿದ್ದಾರೆ. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಇತರ ರಾಜಕೀಯ ಗಣ್ಯರು ಹಾಗೂ ಉದ್ಯಮ ಮತ್ತು ಸಿನಿರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮಾಜಿ ಪ್ರಧಾನಿ ಡಾ.ಮನಮೋಹನ್ ನಿಧನ ಹಿನ್ನಲೆ : ಡಿ.27 ( ಇಂದು) ಶಾಲಾ ಕಾಲೇಜುಗಳಿಗೆ ರಜೆ
ಕರ್ನಾಟಕ ರಾಜ್ಯಾದ್ಯಂತೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮನಮೋಹನ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ಡಿ.27ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಎಲ್ಲಾ
ಸರ್ಕಾರಿ ಕಾರ್ಯಕ್ರಮಗಳನ್ನು ಈಗಾಗಲೇ ಒಂದು ವಾರಗಳ ಕಾಲ ರದ್ದು ಮಾಡುವುದಾಗಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.