
ಉಡುಪಿ: ಉದ್ಯಾವರ ಬಲೈಪಾದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಓವರ್ರ್ಟೇಕ್ ಮಾಡುವ ದಾವಂತದಲ್ಲಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಕಂಟೈನರ್ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಕಾಪು ಕಡೆಯಿಂದ ಉಡುಪಿ ಕಡೆ ಬರುತ್ತಿದ್ದ ಸ್ಯಾಂಟ್ರೋ ಕಾರು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಕಂಟೈನರ್ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ದಂಪತಿಗಳು ಯಾವುದೇ ಗಾಯಗಳಾದ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.
ಕಾರು ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
