
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಕರಕಲಾದ ಘಟನೆ ಸಂಭವಿಸಿದೆ. ಕಾರ್ಕಳ ತಾಲೂಕಿನ ಬೈಪಾಸ್ ಸರ್ಕಲ್ ಬಳಿ ನಿಲ್ಲಿಸಿದ್ದ ಓಮ್ನಿ ಕಾರಿನಲ್ಲಿ ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ.
ಮೊದಲು ಸಣ್ಣಗೆ ಕಾಣಿಸಿಕೊಂಡ ಬೆಂಕಿ ಕ್ರಮೇಣ ಕಾರನ್ನೇ ವ್ಯಾಪಿಸಿದೆ. ಕೆಲ ಹೊತ್ತಿನ ಬಳಿಕ ಹೆದ್ದಾರಿಯ ಪಕ್ಕದಲ್ಲೇ ಧಗಧಗನೇ ಹೊತ್ತಿ ಉರಿಯುತ್ತಿದ್ದ ಓಮ್ನಿ ಕಾರನ್ನು ಜನರು ತದೇಕಚಿತ್ತದಿಂದ ವೀಕ್ಷಿಸಿದರು.ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ.
