

ಮಂಗಳೂರು : ಕಾಡಾನೆಯೊಂದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು.
ಸ್ಥಳಕ್ಕೆ ಪಶು ವೈದ್ಯರು ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನಾರು ಪ್ರದೇಶದ ಗುಡ್ಡದಲ್ಲಿ ಫೆ.13 ರಂದು ಮಧ್ಯಾಹ್ನ ಕಾಡಾನೆ ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು, ತಕ್ಷಣ ಸಿಬ್ಬಂದಿ ಹಾಗೂ ಪಶು ವೈದ್ಯರಾದ ಡಾ. ಯಶಸ್ವಿಯವರು ಸ್ಥಳಕ್ಕೆ ಹೋಗಿ ಚಿಕಿತ್ಸೆ ನೀಡಿದ್ದಾರೆ.
ಆನೆ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಯಾವ ಕಾರಣದಿಂದ ಆನೆಗೆ ಗಾಯವಾಗಿದೆ ಎನ್ನುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್.ಎಫ್.ಓ ತ್ಯಾಗರಾಜ್ ಮತ್ತು ತಂಡ ಪರಿಶೀಲನೆ ನಡೆಸುತ್ತಿದ್ದಾರೆ.