March 5, 2026
MANDYA

ಮಂಡ್ಯ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಮುಖ್ಯಮಂತ್ರಿ, ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳ ಹೆಸರು ಹಾಗೂ ಸಹಿ ನಕಲು ಮಾಡಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯದ ತಾವರೆಗೆರೆ ನಿವಾಸಿ ಹೆಚ್.ಸಿ.ವೆಂಕಟೇಶ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿ ಹೆಚ್.ಸಿ.ವೆಂಕಟೇಶ್ ಸರ್ಕಾರಿ ಅಧಿಕಾರಿ ಎಂದು ಹೇಳಿಕೊಂಡು ಕೆಲಸ ಕೊಡಿಸುವುದಾಗಿ ನಂಬಿಸಿ ಎರಡು ಕೋಟಿ ರೂಪಾಯಿಗೂ ಅಧಿಕ ಹಣ ಸುಲಿಗೆ ಮಾಡಿದ್ದನು. ಹಣ ನೀಡಿದ ಬಳಿಕ, ನಕಲಿ ನೇಮಕಾತಿ ಪತ್ರವನ್ನು ಸಂತ್ರಸ್ತರಿಗೆ ನೀಡುತ್ತಿದ್ದನು. ಅಬಕಾರಿ ಇಲಾಖೆಯಲ್ಲಿ ಚಾಲಕ ಹುದ್ದೆ ಕೊಡಿಸುತ್ತೇನೆಂದು ಓರ್ವರಿಂದ ನಕಲಿ ದಾಖಲೆ ಸೃಷ್ಟಿಸಿ ಮೂವರಿಂದ 45 ಲಕ್ಷ ರೂ. ಪಡೆದು ವಂಚಿಸಿದ್ದಾನೆ. ಆರೋಪಿಯ​​ ಬಳಿ ಇದ್ದ ಕೆಪಿಎಸ್​ಸಿ, ಅಬಕಾರಿ, ವಾಣಿಜ್ಯ ತೆರಿಗೆ, ನಗರಾಭಿವೃದ್ಧಿ ಇಲಾಖೆ, ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಪತ್ರ ಸ್ಥಳ ನಿಯೋಜಿಸಿ ಆದೇಶ ಹೊರಡಿಸಿರುವ ನಕಲಿ ನೇಮಕಾತಿ ಪತ್ರಗಳು, ದಾಖಲೆಗಳು, ಹಾಜರಾತಿ ಪುಸ್ತಕಗಳು, ಸರ್ಕಾರದ ಲೋಗೋ, ನಕಲಿ ಐಡಿ ಕಾರ್ಡ್, ಟ್ಯಾಗ್​ಳನ್ನು​ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿ ವೆಂಕಟೇಶ್​ ವಿವಿಧ ಇಲಾಖೆಗಳ ನಕಲಿ ಲೆಟರ್ ಹೆಡ್, ಸೀಲು, ಅಧಿಕಾರಿಗಳ ಸಹಿ ಕೂಡ ನಕಲು ಮಾಡುತ್ತಿದ್ದನು ಎಂದು ತಿಳಿದು ಬಂದಿದೆ. ಆರೋಪಿ ವೆಂಕಟೇಶ್​​ ವಿರುದ್ಧ ಮಂಡ್ಯ ಪೂರ್ವ ಠಾಣೆಯಲ್ಲಿ ಪ್ರತ್ಯೇಕ 3 ಪ್ರಕರಣ ದಾಖಲಾಗಿದ್ದು, 316(2), 318(4), 336(3), 61, 351(2), 3(5) ಅಡಿ ಪ್ರಕರಣ ದಾಖಲಾಗಿವೆ.

About The Author

Leave a Reply

Your email address will not be published. Required fields are marked *

You cannot copy content of this page.