

ಮಂಗಳೂರು: ನಗರದ ಬಿಜೈ ಕಾಪಿಕಾಡಿನಲ್ಲಿ ನಿವೃತ್ತ ಬಿ.ಎಸ್.ಎನ್.ಎಲ್ ಉದ್ಯೋಗಿಯೊಬ್ಬರು ಹಳೆ ದ್ವೇಷದಲ್ಲಿ ನೆರೆಮನೆಯಾತನನ್ನು ಕೊಲ್ಲುವ ಉದ್ದೇಶದಿಂದ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬಂದು ಬೈಕಿಗೆ ಡಿಕ್ಕಿ ಹೊಡೆದು ಮುಂದಕ್ಕೆ ಚಲಿಸಿ ನಡೆದುಕೊಂಡು ಹೋಗುತ್ತಿದ್ದ ಹೆಂಗಸಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಬಿ.ಎಸ್.ಎನ್.ಎಲ್ ಉದ್ಯೋಗಿ ಸತೀಶ್ ಕುಮಾರ್ ಮತ್ತು ಮುರಳಿ ಪ್ರಸಾದ ಅವರು ಅಕ್ಕಪಕ್ಕದ ನಿವಾಸಿಯಾಗಿರುತ್ತಾರೆ. ಸತೀಶ್ ಕುಮಾರ್.ಕೆ.ಎಂ ರವರಿಗೆ ಮುರಳಿ ಪ್ರಸಾದ್ ಹಾಗೂ ಅವರ ಮನೆಯವರೊಂದಿಗೆ ಮೊದಲಿನಿಂದಲು ಸದಾಕಾಲ ತಂಟೆತಕರಾರು ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದು, ಈ ಹಿಂದೆ ಮುರಳಿ ಪ್ರಸಾದ ತಂದೆಯವರು ನಡೆದುಕೊಂಡು ಹೋಗುತ್ತಿರುವಾಗ ಆರೋಪಿತ ಸತೀಶ್ ಕುಮಾರ್.ಕೆ.ಎಂ ಎಂಬಾತನು ಕಾರಣ ವಿಲ್ಲದೆ ಬೈಕ್ನಲ್ಲಿ ಬಂದು ತಾಗಿಸಿಕೊಂಡು ಹೋಗಿ ಅವಾಚ್ಯ ಶಬ್ದದಿಂದ ನಿಂದಿಸಿದ್ದು, ಈ ಬಗ್ಗೆ ಉರ್ವಾ ಠಾಣೆಯಲ್ಲಿ 2023 ರಲ್ಲಿ ದೂರು ದಾಖಲಾಗಿರುತ್ತದೆ.
ಆದರೆ ಇದೀಗ ಇಂದು ಬೆಳಗ್ಗೆ 8.15 ರ ಸುಮಾರಿಗೆ ಬಿಜೈ ಕಾಪಿಕಾಡ್ನ 6 ನೇ ಮುಖ್ಯ ರಸ್ತೆಯಲ್ಲಿ ಮುರಳಿ ಪ್ರಸಾದ ರವರು ತನ್ನ ಬೈಕ್ ನಲ್ಲಿ ಮನೆಯಿಂದ ಹೋಗುತ್ತಿರುವಾಗ ಆರೋಪಿತ ಸತೀಶ್ ಕುಮಾರ್.ಕೆ.ಎಂ ಅವರು ತಮ್ಮ ಕಾರಿನಲ್ಲಿ ಕಾದು ಕುಳಿತು ಮುರಳಿ ಪ್ರಸಾದರವರನ್ನು ಕೊಲೆಮಾಡುವ ಉದ್ದೇಶದಿಂದ ಕಾರನ್ನು ಅತೀ ವೇಗವಾಗಿ ಚಲಾಯಿಸಿಕೊಂಡು ಬಂದು ಬೈಕಿಗೆ ಡಿಕ್ಕಿ ಹೊಡೆದು ಮುಂದಕ್ಕೆ ಚಲಿಸಿ ನಡೆದುಕೊಂಡು ಹೋಗುತ್ತಿದ್ದ ಹೆಂಗಸಿಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ನಡೆದುಕೊಂಡು ಗೋಗುತ್ತಿದ್ದ ಹೆಂಗಸಿಗೆ ಗಾಯವಾಗಿದ್ದು, ಮುರಳಿ ಪ್ರಸಾದ ರವರಿಗೂ ಕೂಡ ಗಾಯಗಳು ಉಂಟಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಆರೋಪಿತ ಸತೀಶ್ ಕುಮಾರ್.ಕೆ.ಎಂ ರವರನ್ನು ವಶಕ್ಕೆ ಪಡೆದುಕೊಂಡು, ಕಾರನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.
ಆರೋಪಿತ ಸತೀಶ್ ಕುಮಾರ್.ಕೆ.ಎಂ ಎಂಬವರು ಪೂರ್ವ ದ್ವೇಷದಿಂದ ಕೊಲೆಮಾಡುವ ಉದ್ದೇಶದಿಂದ ಈ ಕೃತ್ಯವೆಸಗಿದ್ದು, ಈ ಬಗ್ಗೆ ನಗರದ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಸತೀಶ್ ಕುಮಾರ್ ವಿರುದ್ಧ ಕೊಲೆಯತ್ನ ಕೇಸು ದಾಖಲಿಸಿದ್ದು ಬಂಧಿಸಿದ್ದಾರೆ. ಈಗಾಗಲೇ 2023ರಲ್ಲಿ ಮುರುಳಿ ಪ್ರಸಾದ್ ಅವರ ತಂದೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಸತೀಶ್ ತಾಗಿಸಿಕೊಂಡು ಸಾಗಿದ್ದು ಉರ್ವಾದಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಕೊಲೆ ಮಾಡುವ ಉದ್ದೇಶದಿಂದ ಮುರುಳಿ ಪ್ರಸಾದ್ ಮೇಲೆ ಕಾರನ್ನು ಡಿಕ್ಕಿಯಾಗಿಸಿದ್ದಾರೆ. ಈ ಬಗ್ಗೆ ಉರ್ವಾ ಠಾಣೆಯಲ್ಲಿ ಕೊಲೆಯತ್ನ ಮತ್ತು ಪಶ್ಚಿಮ ಸಂಚಾರಿ ಠಾಣೆಯಲ್ಲಿ ಮಹಿಳೆಗೆ ಡಿಕ್ಕಿ ಪಡಿಸಿದ ಬಗ್ಗೆ ಪ್ರಕರಣ ದಾಖಲಾಗಿದೆ.