
ಕಾರ್ಕಳ: ಖಾಸಗಿ ಆಸ್ಪತ್ರೆಯಲ್ಲಿ ಆಪರೇಷನ್ ಗೆಂದು ಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.
ಮೂಲತಃ ಸಾಣೂರು ನಿವಾಸಿ, ಆನೆಕೆರೆ ಬಳಿ ಬಾಡಿಗೆ ಮನೆ ಬಳಿ ವಾಸವಿದ್ದ ಐವತ್ತನಾಲ್ಕು ವರ್ಷದ ಜುಬೇದಾ ಮೃತಪಟ್ಟ ಮಹಿಳೆ. ಗೆಡ್ಡೆಯ ಚಿಕಿತ್ಸೆಗಾಗಿ ಇವರು ಆಸ್ಪತ್ರೆಗೆ ತೆರಳಿದ್ದರು. ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಅಲ್ಲಿ ವೈದ್ಯರು ಶಸ್ತ್ರಚಿಕಿತ್ಸೆ ಮಾಡಲು ಮುಂದಾಗಿದ್ದು ಈ ಸಂದರ್ಭ ಎಡವಟ್ಟಾಗಿ ಮಹಿಳೆ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಆಸ್ಪತ್ರೆಯ ಎದುರು ಆಕ್ರೋಶ ಹೊರಹಾಕಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.
