March 20, 2026
WhatsApp Image 2025-05-29 at 9.18.30 AM (1)

ಮಂಗಳೂರು: ಕಾರೊಂದು ರಾಜ ಕಾಲುವೆಗೆ ಬಿದ್ದು ಕಾರಿನಲ್ಲಿದ್ದ ಫೋಟೊಗ್ರಾಫರ್ ಸಾವನ್ನಪ್ಪಿದ ಘಟನೆ ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ 66ರ ಕೋಡಿಕಲ್ ಕ್ರಾಸ್ ಬಳಿ ನಡೆದಿದೆ.

ಅಪಘಾತದಲ್ಲಿ ಕಾರು ಚಾಲಾಯಿಸುತ್ತಿದ್ದ ಫೋಟೊಗ್ರಾಫರ್ ಸೂರ್ಯನಾರಾಯಣ ಮಯ್ಯ (51) ಸಾವನ್ನಪ್ಪಿದ್ದಾರೆ.

ಸೂರ್ಯನಾರಾಯಣ ಅವರು ಪಣಂಬೂರಿನಲ್ಲಿ ನಡೆಯಲಿದ್ದ ಕಾರ್ಯಕ್ರಮದ ಫೋಟೋ ಗ್ರಫಿಗೆಂದು ಬಂದ್ಯೋಡಿನಿಂದ ಬುಧವಾರ ಬೆಳಗ್ಗೆ ಕಾರಿನಲ್ಲಿ ಹೊರಟಿದ್ದರು.ಕೋಡಿಕಲ್ ಕ್ರಾಸ್ ಬಳಿ ಕಾರು ನಿಯಂತ್ರಣ ಕಳೆದುಕೊಂಡು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ತಡೆ ಇಲ್ಲದ ನೀರು ತುಂಬಿದ ರಾಜಕಾಲುವೆಗೆ ಬಿದ್ದಿತು.ಕೂಡಲೇ ಸ್ಥಳೀಯರು ಗಾಯಗೊಂಡ ಸೂರ್ಯನಾರಾಯಣ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಸಂಚಾರ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.