March 19, 2026
WhatsApp Image 2025-05-20 at 10.01.15 AM

ಉಡುಪಿ: ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಯುವಕನೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಉಡುಪಿಯ ಅಜ್ಜರಕಾಡು ಭುಜಂಗ ಪಾರ್ಕ್ ಬಳಿ ನಡೆದಿದೆ.

ಮೂಡ ನಿಡಂಬೂರು ನಿವಾಸಿ, ಇಪ್ಪತ್ತಮೂರು ವರ್ಷದ ಅಕ್ಷಯ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಸೆನ್ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರಿಗೆ ಈ ಬಗ್ಗೆ ಖಚಿತ ಮಾಹಿತಿ ಸಿಕ್ಕಿತ್ತು.

ಈ ಆಧಾರದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಆತನನ್ನು ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.