March 18, 2026
WhatsApp Image 2024-12-30 at 2.42.18 PM

ಬಂಟ್ವಾಳ : ಅಪ್ರಾಪ್ತ ಬಾಲಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಗ್ರಾಮದ ಪರ್ಲಕ್ಕೆ ಎಂಬಲ್ಲಿ ಜುಲೈ 7 ರಂದು ಸಂಜೆ ವೇಳೆ ನಡೆದಿದೆ. ತುಂಬೆ ಪರ್ಲಕ್ಕೆ ನಿವಾಸಿ ಕರುಣಾಕರ ಗಟ್ಟಿ ಅವರ ಏಕೈಕ ಪುತ್ರ ತೇಜಸ್ ಆತ್ಮಹತ್ಯೆ ಮಾಡಿಕೊಂಡ ಬಾಲಕನಾಗಿದ್ದಾನೆ.

ತೇಜಸ್ ಮೊಡಂಕಾಪು ಕಾಲೇಜೊಂದರಲ್ಲಿ ಪಿಯುಸಿ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಆತನಿಗೆ ಪರೀಕ್ಷೆ ಇದ್ದು, ಸಂಜೆ ವೇಳೆ ಕ್ಲಾಸಿನಿಂದ ಮನೆಗೆ ಬಂದಿದ್ದಾನೆ. ತಂದೆ ತಾಯಿ ಇಬ್ಬರು ‌ಖಾಸಗಿ ಕೆಲಸದಲ್ಲಿರುವ ಕಾರಣ ಅವರು ಮನೆಗೆ ಬರುವಾಗ ರಾತ್ರಿಯಾಗುತ್ತದೆ. ಮಗ ಎಂದಿನಂತೆ ಸಂಜೆ ಮನೆಗೆ ಬಂದಿದ್ದ.

ತಂದೆ ಮನೆಗೆ ಬಂದಾಗ ಬಾಗಿಲು ಹಾಕಿದ್ದು ಕಂಡು ಮನೆಯೊಳಗೆ ನೋಡಿದಾಗ ಕೋಣೆಯಲ್ಲಿ ಈತ ನೇಣು ಬಿಗಿದು ನೇತಾಡುವುದು ಕಂಡು ಬಂದಿದೆ. ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ಆತ ಮೃತಪಟ್ಟಿರುವುದಾಗಿ ವೈದ್ಯರು‌ ಪರೀಕ್ಷಿಸಿ ತಿಳಿಸಿದ್ದಾರೆ. ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ, ತುಂಬೆ ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.