March 20, 2026
WhatsApp Image 2025-07-15 at 5.47.46 PM (1)

ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ

ಬಂಧಿತರನ್ನು ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ, ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ.

ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿಕೊಂಡಿದ್ದ. ಬಳಿಕ ವಾಟ್ಸಾಪ್ ನಲ್ಲಿ ಚಾಟ್ ಮಾಡುತ್ತಿದ್ದ, ವಿದ್ಯಾರ್ಥಿನಿ ನಂಬಿ ಆಗಾಗ ಉಪನ್ಯಾಸಕನಿಂದ ನೋಟ್ಸ್ ಪಡೆಯುತ್ತಿದ್ದ. ಆಕೆ ಬೆಂಗಳೂರಿಗೆ ಬಂದ ನಂತರವೂ ಚಾಟ್ ಮಾಡುವುದು, ನೋಟ್ಸ್ ನೀಡುವುದನ್ನು ಮುಂದುವರಿಸಿದ್ದ. ಅದೇ ನೆಪದಲ್ಲಿ ಮಾರತಹಳ್ಳಿಯ ಗೆಳೆಯನ ರೂಮ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ.

ಉಪನ್ಯಾಸಕ ನರೇಂದ್ರ ದುಷ್ಕೃತ್ಯ ಎಸಗಿದ ಬಳಿಕ ಜೀವಶಾಸ್ತ್ರ ವಿಭಾಗದ ಉಪನ್ಯಾಸಕ ಸಂದೀಪ್ ಸಹ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಸಮಯದಲ್ಲಿ ಆಕೆ ಪ್ರತಿರೋಧ ವ್ಯಕ್ತಪಡಿಸಿದಳು. ಆಗ, ನೀನು ನರೇಂದ್ರನ ಜೊತೆಗೆ ಇರುವ ಫೋಟೊ ಹಾಗೂ ವಿಡಿಯೋ ನನ್ನ ಬಳಿ ಇದೆ. ಅದನ್ನು ಕಾಲೇಜಿನಲ್ಲಿ ಎಲ್ಲರಿಗೂ ಗೊತ್ತಾಗುವಂತೆ ಮಾಡುವೆ ಎಂದು ಬ್ಲ್ಯಾಕ್ಮೇಲ್ ಮಾಡಿ ಅತ್ಯಾಚಾರ ನಡೆಸಿದ್ದ.

ಉಪನ್ಯಾಸಕರನ್ನು ಎದುರಿಸಲು ಸಾಧ್ಯವಾಗದೆ ಆರಂಭದಲ್ಲಿ ಸುಮ್ಮನಿದ್ದ ವಿದ್ಯಾರ್ಥಿನಿ, ನಂತರ ಸಮಸ್ಯೆ ಹೆಚ್ಚಾಗಲು ಆರಂಭವಾದಾಗ ಕೃತ್ಯದ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಪೋಷಕರು ಆಕೆಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆಕೆಗೆ ಕೌನ್ಸೆಲಿಂಗ್ ಮಾಡಿ ಪೊಲೀಸರಿಗೆ ದೂರು ಕೊಡಿಸಿದ್ದಾರೆ.

ಸದ್ಯ ಮೂವರು ಆರೋಪಿಗಳನ್ನು ಬಂಧಿಸಿರುವ ಮಾರತಹಳ್ಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಉಪನ್ಯಾಸಕರು ಈ ಹಿಂದೆಯೂ ಕೆಲವು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮಾಡಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿರುವ ಅನುಮಾನ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ನಡೆಯತ್ತಿದೆ.

About The Author

Leave a Reply

Your email address will not be published. Required fields are marked *

You cannot copy content of this page.