
ಮಂಗಳೂರು: ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿಯೋಜನೆಗಳ ಅನುಷ್ಟಾನದ ಅಧ್ಯಕ್ಷರಾದ ಶ್ರೀ ಸುರೇಂದ್ರ ಕಂಬಳಿ ಇವರ ಅಧ್ಯಕ್ಷತೆಯಲ್ಲಿ ದಿನಾಂಕ 19-08-2025 ರಂದು ಅಪರಾಹ್ನ 2.30 ಕ್ಕೆ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪ್ರಗತಿಪರಿಶೀಲನೆ ಸಭೆ ಜರುಗಿತು.
ಗೃಹಲಕ್ಷ್ಮೀ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ಪ್ರಸ್ತುತ 85044 ಫಲಾನುಭವಿಗಳು ನೋಂದಣಿಯಾಗಿದ್ದು ಈ ಈವರೆಗೆರೂ 305,04,48000 ಮಂಜೂರಾಗಿರುತ್ತದೆ ಎಂದು ಸಭೆಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಗಳೂರು ನಗರ ಇವರು ಮಾಹಿತಿ ನೀಡಿದರು.
ಮಂಗಳೂರು- ಗುರುಪುರ- ಕೈಕಂಬ- ಬಜ್ಪೆ ಮೂಲಕ ಕಟೀಲಿಗೆ ಮತ್ತು ವಾಮಂಜೂರು ಪರಾರಿ ಮೂಲಕ ಉಳಾಯಿಬೆಟ್ಟುಗೆ ಸರಕಾರಿ ಬಸ್ಸು ಸೇವೆ ಒದಗಿಸಿಕೊಡುವುದರ ಬಗ್ಗೆ ಸದಸ್ಯರು ಚರ್ಚಿಸಿದರು.
ರಾಜ್ಯ ಸರಕಾರದ ಯುವನಿಧಿ ಯೋಜನೆಗೆ 2025ನೇ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಈ ಬಗ್ಗೆ ಕರಪತ್ರವನ್ನು ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು.
ತಾಲೂಕು ಪಂಚಾಯತ್ ಸಹಾಯಕ ಲೆಕ್ಕಧಿಕಾರಿ ಶ್ರೀ ಪರಮೇಶ್ವರ ಇವರು ಸಮಿತಿಯ ಸದಸ್ಯರು ಹಾಗೂ ಇಲಾಖಾ ಅಧಿಕಾರಿಗಳಿಗೆ ಸ್ವಾಗತಿಸಿದರು. ತಾಲೂಕುಮಟ್ಟದ ಅನುಷ್ಟಾನ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಮಹೇಶ್ ಕುಮಾರ್ ಹೊಳ್ಳ ಇವರು ಧನ್ಯವಾದ ಸಲ್ಲಿಸಿದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಸದಸ್ಯರಾದ ಅಲ್ ಸ್ಟನ್ ಡಿ ಕುನ್ಹ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಸದಸ್ಯರಾದ ರಾಜೇಶ್ ಶೆಟ್ಟಿ, ಪ್ರಶಾಂತ್ ಎಸ್, ನವಾಜ್, ಶೈಲಾ ನೀತಾ ಡಿ ಸೋಜಾ, ಮೊಹಮ್ಮದ್ ರಫೀಕ್, ರಿತೇಶ್ ಅಂಚನ್, ಜಯಂತಿ, ವಿದ್ಯಾ, ಡಿ.ಎಂ. ಮುಸ್ತಾಫ ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು, ತಾ. ಪಂ ಅಧಿಕಾರಿ ವರ್ಗದವರು, ತಾಲೂಕು ಐಇಸಿ ಸಂಯೋಜಕರು ಹಾಜರಿದ್ದರು.
