
ಸುಳ್ಯ: ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಆಲೆಟ್ಟಿ ಗ್ರಾಮದ ಅರಂಬೂರಿನಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿ ಹಲವರ ವಿರುದ್ಧ ಕೇಸ್ ದಾಖಲಾಗಿದೆ. ಅರಂಬೂರಿನ ಸರಳಿಕುಂಜ ನಿವಾಸಿ ವಿಠಲರವರ ಮಗ ಪುನೀತ್ ಹಲ್ಲೆಗೊಳಗಾದ ಯುವಕ. ಯುವಕರ ತಂಡವೊಂದು ತಲ್ವಾರಿನಿಂದ ಮಾರಣಾಂತಿಕ ಹಲ್ಲೆ ನಡೆಸಿದೆ. ರಾತ್ರಿ ಗಂಟೆ 9.30 ರ ವೇಳೆಗೆ ಆರಂಬೂರಿನಲ್ಲಿರುವ ಮನೆಗೆ ನಾಲ್ವರು ಯುವಕರು ಬೈಕಿನಲ್ಲಿ ಏಕಾಏಕಿಯಾಗಿ ಬಂದು ತಲ್ವಾರಿನಿಂದ ಮತ್ತು ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.
ತಲೆಯ ಭಾಗಕ್ಕೆ ಏಟಾಗಿದ್ದು ಪುನೀತ್ ರವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ಮಾಡಿದ ಆರೋಪಿಗಳ ಪೈಕಿ ಮನೋಜ್, ಚೈತ್ರೇಶ್, ಶ್ರೀಜಿತ್ ಉಪ್ಪಳ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ. ಈ ನಡುವೆ ಓರ್ವ ಆರೋಪಿಯ ಬೈಕನ್ನು ಪೊಲೀಸರು ವಶಪಡಿಸಿಕೊಳ್ಳಲಾಗಿದೆ.
