March 3, 2026
WhatsApp Image 2025-09-06 at 5.59.07 PM

ಬೆಂಗಳೂರು: ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಕಾರು ಕೂಡ ಬರೊಬ್ಬರಿ 7 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ ಕಾರಣ ದಂಡ ಹೇರಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಸುವ ಇನೊವಾ ಕಾರು 2024ರಿಂದ ಈವರೆಗೆ ಏಳು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿರುವುದು ಜಂಕ್ಷನ್‌ಗಳಲ್ಲಿ ಅಳವಡಿಸಿರುವ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ಅದರಂತೆ ಸಿಎಂ ಸಿದ್ದರಾಮಯ್ಯ ಅವರ ಕಚೇರಿ 2,500 ಸಾವಿರ ರೂಗಳನ್ನು ದಂಡವಾಗಿ ಪಾವತಿಸಿದೆ ಎಂದು ತಿಳಿದುಬಂದಿದೆ.

ಪ್ರಸ್ತುತ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶೇ 50ರ ರಿಯಾಯಿತಿ ಅಡಿ ದಂಡ ಪಾವತಿಸಲು ರಾಜ್ಯ ಸರ್ಕಾರವು ಅವಕಾಶ ಕಲ್ಪಿಸಿದ್ದು, ಸಿದ್ದರಾಮಯ್ಯ ಅವರು ಬಳಸುತ್ತಿರುವ ಕಾರಿನ ಮೇಲಿನ ಪ್ರಕರಣಗಳ ಸಂಬಂಧ ದಂಡ ಪಾವತಿಯಾಗಿದೆ ಎಂದು ಸಂಚಾರ ಪೊಲೀಸ್ ಮೂಲಗಳು ತಿಳಿಸಿವೆ. ಆರು ಪ್ರಕರಣಗಳಲ್ಲಿ ಮುಖ್ಯಮಂತ್ರಿ ಸೀಟು ಬೆಲ್ಟ್ ಧರಿಸದೇ ನಿಯಮ ಉಲ್ಲಂಘಿಸಿದ್ದಾರೆ. ಶೇ 50ರಷ್ಟು ರಿಯಾಯಿತಿ ಅನುಸಾರ 2,500 ರೂಪಾಯಿ ದಂಡವಿತ್ತು. ಆರು ಬಾರಿ ಸೀಟು ಬೆಲ್ಟ್ ಧರಿಸದಿದ್ದಕ್ಕಾಗಿ ಮತ್ತು ಒಂದು ಬಾರಿ ಅತಿವೇಗದಲ್ಲಿ ಚಲಿಸಿದ್ದಕ್ಕಾಗಿ ದಂಡ ವಿಧಿಸಲಾಗಿದ್ದು, ಸದ್ಯ ದಂಡದ ಮೊತ್ತವನ್ನು ಪಾವತಿಸಲಾಗಿದೆ ಎಂದು ಸಂಚಾರ ಪೊಲೀಸ್ ಮೂಲಗಳು ತಿಳಿಸಿವೆ.

About The Author

Leave a Reply

Your email address will not be published. Required fields are marked *

You cannot copy content of this page.