March 19, 2026
WhatsApp Image 2025-09-10 at 6.13.28 PM

ಮಂಗಳೂರು: ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಅಧ್ಯಕ್ಷರಾದ ಶ್ರೀ ಸುರೇಂದ್ರ ಕಂಬಳಿ ಇವರ ಅಧ್ಯಕ್ಷತೆಯಲ್ಲಿ ದಿನಾಂಕ 10-09-2025 ರಂದು ಅಪರಾಹ್ನ 2.30 ಕ್ಕೆ ಮಂಗಳೂರು ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ಜರುಗಿತು.

ಮಂಗಳೂರು ಅದ್ಯಪಾಡಿಗೆ ಇದ್ದಂತಹ ಸರಕಾರಿ ಬಸ್ಸು ಪ್ರಸ್ತುತ ಸ್ಥಗಿತಗೊಂಡಿದ್ದು ಪುನರ್ ಪ್ರಾರಂಬಿಸುವಂತೆ ಮನವಿ ಸ್ವೀಕರಿಸಲಾಯಿತು.

ಮಂಗಳೂರಿನಿಂದ -ಗುರುಪುರ-ಕೈಕಂಬ ಮಾರ್ಗವಾಗಿ ಕಟೀಲ್‌ ಕ್ಷೇತ್ರಕ್ಕೆ ಸರಕಾರಿ ಬಸ್ಸು ವ್ಯವಸ್ಥೆ ಕಲ್ಪಿಸುವಂತೆ ಸದಸ್ಯರು ಸಭೆಯಲ್ಲಿ ಬೇಡಿಕೆ ಇಟ್ಟಾಗ ಈ ಬಗ್ಗೆ ಕೇಂದ್ರ ಕಛೇರಿಗೆ ಪ್ರಸ್ತಾವನೆ ಸಲ್ಲಿಸುವುದಾಗಿ ನಿರ್ಮಲ.ಎ ಸಹಾಯಕ ವ್ಯವಸ್ಥಾಪಕರು ಕೆ,.ಎಸ್.ಆರ್.ಟಿ.ಸಿ ಮಂಗಳೂರು ಇವರು ಸಭೆಯಲ್ಲಿ ತಿಳಿಸಿದರು.

ತಾಲೂಕು ಪಂಚಾಯತ್ ಸಹಾಯಕ ಲೆಕ್ಕಧಿಕಾರಿ ಶ್ರೀ ಪರಮೇಶ್ವರ ಇವರು ಸಮಿತಿಯ ಸದಸ್ಯರು ಹಾಗೂ ಇಲಾಖಾ ಅಧಿಕಾರಿಗಳಿಗೆ ಸ್ವಾಗತಿಸಿದರು. ತಾಲೂಕು ಮಟ್ಟದ ಅನುಷ್ಟಾನ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಮಹೇಶ್ ಕುಮಾರ್ ಹೊಳ್ಳ ಇವರು ಧನ್ಯವಾದ ಸಮರ್ಪಿಸಿದರು.. ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಸದಸ್ಯರಾದ ಅಲ್ ಸ್ಟನ್ ಡಿ ಕುನ್ಹ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಸದಸ್ಯರಾದ ರಾಜೇಶ್ ಶೆಟ್ಟಿ, ಪ್ರಶಾಂತ್ ಎಸ್, ನವಾಜ್, ಶೈಲಾ ನೀತಾ ಡಿ ಸೋಜಾ, ಮೊಹಮ್ಮದ್ ರಫೀಕ್, ರಿತೇಶ್ ಅಂಚನ್, ಜಯಂತಿ, ವಿದ್ಯಾ, ಶ್ರೀಧರ ಪಂಜ ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು, ತಾ.ಪಂ ಅಧಿಕಾರಿ ವರ್ಗದವರು, ತಾಲೂಕು ಐಇಸಿ ಸಂಯೋಜಕರು ಹಾಜರಿದ್ದರು

About The Author

Leave a Reply

Your email address will not be published. Required fields are marked *

You cannot copy content of this page.