
ಮಂಗಳೂರು: ಮರದ ದಿಮ್ಮಿ ಹೇರಿಕೊಂಡು ತಲಪಾಡಿ ಕಡೆಗೆ ತೆರಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲೇ ಪಲ್ಟಿಯಾದ ಘಟನೆ ರಾ.ಹೆ.66ರ ಎಕ್ಕೂರಿನಲ್ಲಿ ಶನಿವಾರ (ಸೆ.13) ಮಧ್ಯಾಹ್ನ ನಡೆದಿದೆ.
ಅತೀ ವೇಗ ಮತ್ತು ಅಜಾರೂಕತೆಯ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಘಟನೆಯಿಂದಾಗಿ ಕೆಲ ಕಾಲ ಹೆದ್ದಾರಿಯಲ್ಲಿ ಸಂಚಾರ ದಟ್ಟನೆಯುಂಟಾಗಿದ್ದು, ಇತರ ವಾಹನಗಳ ಸಂಚಾರಕ್ಕೆ ತೊಡಕುಂಟಾಯಿತು.
