March 12, 2026
WhatsApp Image 2025-09-20 at 3.17.10 PM

ಉಡುಪಿ ನಗರದ ಚಿತ್ತರಂಜನ್ ವೃತ್ತದಲ್ಲಿ ಚಿನ್ನ ಕರಗಿಸುವ ಅಂಗಡಿಯಲ್ಲಿ 95 ಲಕ್ಷ ಮೌಲ್ಯದ ಚಿನ್ನ ಬೆಳ್ಳಿ ಹಾಗೂ ನಗದು ಕಳವು ಮಾಡಿದ ಪ್ರಕರಣವನ್ನು ಉಡುಪಿ ಪೊಲೀಸರು ಭೇದಿಸಿದ್ದಾರೆ.

ಪ್ರಕರಣಕ್ಕೆಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಾದ ಸೋಲಾಪುರದ ಶುಭಂ ತಾನಾಜಿ ಸಾಥೆ(25), ಪ್ರವೀಣ ಅಪ್ಪ ಸಾಥೆ, ನಿಲೇಶ ಬಾಪು ಕಸ್ತೂರಿ, ಸಾಗರ ದತ್ತಾತ್ರೇಯ ಕಂಡಗಾಲೆ(32), ಬಾಗವ ರೋಹಿತ್ ಶ್ರೀಮಂತ್(25)ಬಂಧಿತರು. ಆರೋಪಿಗಳನ್ನು ಸೆ. 12 ರಂದು ಮಹಾರಾಷ್ಟ್ರ ಸೋಲಾಪುರ ಜಿಲ್ಲೆ ಮಲ್‌ಶಿರೋಸ್ ತಾಲೂಕು, ನಿಮ್‌ಗಾಂವ್‌ ಎಂಬಲ್ಲಿ ವಶಕ್ಕೆ ಪಡೆದು ಆರೋಪಿಗಳಿಂದ 74,88,000 ರೂಪಾಯಿ ಮೌಲ್ಯದ  748.8 ಗ್ರಾಂ ಚಿನ್ನ, 4 ಕೆಜಿ  445 ಗ್ರಾಂ ಬೆಳ್ಳಿ , 5,00,000 ರೂ. ನಗದು ಕೃತ್ಯಕ್ಕೆ ಬಳಸಿದ ಮಾರುತಿ ಸ್ವಿಫ್ಟ್ ಕಾರು ಅಂದಾಜು ಮೌಲ್ಯ 4,00,000 ಸಹಿತ ಒಟ್ಟು ರೂ. 87,48,000 ಮೌಲ್ಯದ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಪ್ರಕರಣದಲ್ಲಿ ಆರೋಪಿ ಮತ್ತು ಸ್ವತ್ತು ಪತ್ತೆಯ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ್ ವಿ.ಬಡಿಗೇರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿತ್ತು.

About The Author

Leave a Reply

Your email address will not be published. Required fields are marked *

You cannot copy content of this page.