
ಬೆಳ್ತಂಗಡಿ : ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಬೆಳ್ತಂಗಡಿ ಪೊಲೀಸರು ದಾಖಲಿಸಿರುವ ಅಕ್ರಮ ಶಸ್ತ್ರಾಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಮಹೇಶ್ ಶೆಟ್ಟಿ ತಿಮರೋಡಿ ಗೈರು ಹಾಜರಾಗಿದ್ದಾರೆ. ಈ ಹಿನ್ನಲೆ ಇದೀಗ ತಿಮರೋಡಿಗೆ ವಿಚಾರಣೆಗೆ ಹಾಜರಾಗಲು ಪೊಲೀಸರು ಎರಡನೇ ನೋಟಿಸ್ ಜಾರಿ ಮಾಡಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್ ಐಟಿ ಶೋಧದ ವೇಳೆ ಆಗಸ್ಟ್ 26 ರಂದು ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.16 ರಂದು ಪ್ರಕರಣ ದಾಖಲಾಗಿತ್ತು. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ತಿಳಿಸಲು ಬೆಳ್ತಂಗಡಿ ಪೊಲೀಸರು ಸೆ.19 ರಂದು ಮನೆಗೆ ತೆರಳಿದಾಗ ಮಹೇಶ್ ಶೆಟ್ಟಿ ಮನೆಯಲ್ಲಿ ಇರಲಿಲ್ಲ. ಬಳಿಕ ಪೊಲೀಸರು ಗೋಡೆಗೆ ಸೆ.21 ರಂದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಅಂಟಿಸಿ ಬಂದಿದ್ದರು.
ಆದರೆ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಸೆ.21 ರಂದು ಹಾಜರಾಗಲು ಅಸಾಧ್ಯ ಮುಂದಿನ ದಿನಗಳಲ್ಲಿ ಬರುವುದಾಗಿ ಆಪ್ತರ ಮೂಲಕ ತನಿಖಾಧಿಕಾರಿಗೆ ಮನವಿ ಪತ್ರ ನೀಡಿದ್ದರು. ಸೆ.21ರಂದು ಬೆಳ್ತಂಗಡಿ ಪೊಲೀಸರು ಸೆ.25 ರಂದು ತನಿಖೆಗೆ ಹಾಜರಾಗಲು ಮತ್ತೆ ನೋಟಿಸನ್ನು ತಿಮರೋಡಿ ಮನೆಯ ಗೋಡೆಗೆ ಅಂಟಿಸಿ ಜಾರಿ ಮಾಡಿದ್ದಾರೆ.
