December 5, 2025
WhatsApp Image 2025-10-07 at 12.41.39 PM

ಶಾಲಾ ಕಾಲೇಜುಗಳ ಬಸ್‌ಗಳಿಗೆ ನಕಲಿ ವಿಮೆ ಪಾಲಿಸಿ ಮಾಡಿ ಕೋಟ್ಯಾಂತರ ರೂಪಾಯಿ ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಉಡುಪಿ ಜಿಲ್ಲಾ ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ. ಸಾಸ್ತಾನ ಕುಂಜಿಕೆರೆ ರಸ್ತೆಯ ರಾಕೇಶ ಎಸ್(33) ಹಾಗೂ ಶಿರಸಿಯ ಚರಣ ಬಾಬು ಮೇಸ್ತ ಬಂಧಿತ ಆರೋಪಿಗಳು.

2024ರ ನವೆಂಬರ್ 25ರರಂದು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಹೊಂಬಾಡಿ- ಮಂಡಾಡಿ ಗ್ರಾಮದ ಹುಣ್ಸೆಮಕ್ಕಿ ಎಂಬಲ್ಲಿ ಶಾಲಾ ವಾಹನವೊಂದು ರಿಕ್ಷಾಕ್ಕೆ ಡಿಕ್ಕಿಯಾಗಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ನ್ಯಾಯಾಲಯದಲ್ಲಿದ್ದು, ರಿಕ್ಷಾ ಚಾಲಕ ವಿಮಾ ಪರಿಹಾರವಾಗಿ 15,95,000 ರೂಪಾಯಿ ಹಣ ನೀಡುವಂತೆ ಕೋರಿದ್ದರು. ಈ ವೇಳೆ ವಿಮಾ ಕಂಪನಿಯವರು ಪರಿಶೀಲಿಸಿದಾಗ ಶಾಲಾ ಬಸ್ಸಿನ ಪಾಲಿಸಿ ನಕಲಿ ಎಂಬುವುದು ತಿಳಿದು ಬಂದಿದೆ.

ರಿಲಯನ್ಸ್ ಜನರಲ್ ಇನ್ಯೂರೆನ್ಸ್ ಕಂಪನಿಯ ಮ್ಯಾನೇಜರ್ ನೀಡಿದ ದೂರಿನಂತೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ನೇತೃತ್ವದಲ್ಲಿ ಕೋಟ ಠಾಣಾ ಎಸ್ಸೆöÊ ಪ್ರವೀಣ ಕುಮಾರ್ ಅವರನ್ನು ಒಳಗೊಂಡ ವಿಶೇಷ ತನಿಖಾ ತಂಡ ಆರೋಪಿಗಳನ್ನು ಬಂಧಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.