
ರಾಮನಗರ : ಬಿಗ್ ಬಾಸ್ ಸೀಸನ್ 12 ಕ್ಕೆ ಇದ್ದ ಅಡ್ಡಿ ಸದ್ಯದ ಮಟ್ಟಿಗೆ ನಿವಾರಣೆಯಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿಗ್ ಬಾಸ್ ಮನೆಯಲ್ಲಿ ಓಪನ್ ಮಾಡುವಂತೆ ಸೂಚನೆ ನೀಡಿದ್ದು, ಈಗಾಗಲೇ ಸ್ಪರ್ಧಿಗಳು ಮನೆಗೆ ಎಂಟ್ರಿಕೊಟ್ಟಿದ್ದಾರೆ.
ಬಿಗ್ ಬಾಸ್ ಶೂಟಿಂಗ್ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋ ಮಾಲಿನ್ಯ ನಿಯಮವನ್ನು ಉಲ್ಲಂಘಿಸಿದ್ದಕ್ಕೆ ರಾಮನಗರ ಜಿಲ್ಲಾಡಳಿತ ಜಾಲಿವುಡ್ ಸ್ಟುಡಿಯೋಗೆ ಅಕ್ಟೋಬರ್ 7 ರಂದು ಬೀಗ ಹಾಕಿತ್ತು. ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಿದ್ದರಿಂದ ಬಿಗ್‌ಬಾಸ್ ಮನೆಗೂ ಬೀಗ ಬಿದ್ದಿತ್ತು.ಈ ನಡುವೆ ಕಿಚ್ಚ ಸುದೀಪ್ ಹಾಗೂ ಡಿಕೆಶಿ ನಡುವಿನ ಭಿನ್ನಾಭಿಪ್ರಾಯಕ್ಕೆ ಈ ರೀತಿ ಮಾಡಿದ್ದಾರೆ ಎಂದು ಜೆಡಿಎಸ್ ಮತ್ತು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು, ಇದೆಲ್ಲದರ ನಡುವೆ ಡಿಕೆಶಿ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಪಾಲಿಸಿಲ್ಲ ಎಂಬ ಕಾರಣಕ್ಕೆ ಬಿಗ್‌ಬಾಸ್ ನಡೆಯುವ ಜಾಲಿವುಡ್ ಸ್ಟುಡಿಯೋ ಬಂದ್ ಮಾಡಲಾಗಿದೆ. ಆದರೆ ಇಲ್ಲಿ ಖಾಸಗಿಯವರು ಹೂಡಿಕೆ ಮಾಡಿರುತ್ತಾರೆ, ಉದ್ಯೋಗ ನಡೆಯುವುದು ಮುಖ್ಯ. ಹೀಗಾಗಿ ತಪ್ಪುಗಳನ್ನು ಸರಿಪಡಿಸಿಕೊಂಡು ಹೋಗಲು ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದರು. ಇದನ್ನೂ
ರಾತ್ರಿ ಜಾಲಿವುಡ್ ಸ್ಟುಡಿಯೋ ಪ್ರತಿನಿಧಿಗಳು ಡಿಕೆಶಿಯನ್ನು ಭೇಟಿಯಾಗಿದ್ದಾರೆ. ಆ ನಂತರ ಬೆಂಗಳೂರು ದಕ್ಣಿಣ ಜಿಲ್ಲಾಧಿಕಾರಿಗೆ ಕರೆ ಮಾಡಿ ಡಿಕೆಶಿ ಸ್ಟೇಟಸ್ ರಿಪೋರ್ಟ್ ಪಡೆದಿದ್ದಾರೆ. ಈ ವೇಳೆ ಪಿಸಿಬಿ ಅಧ್ಯಕ್ಷ ನರೇಂದ್ರಸ್ವಾಮಿ ಜೊತೆಯೂ ಡಿಕೆಶಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಕೋರ್ಟ್ ವಿಚಾರ ಕೋರ್ಟ್‌ನಲ್ಲೇ ನಡೆಯಲಿ. ಆದರೆ ಜಾಲಿವುಡ್ ಸಿಬ್ಬಂದಿಗೆ ನೋಟಿಸ್ ನೀಡಿದರೂ ಪ್ರತಿಕ್ರಿಯೆ ಕೊಡದಷ್ಟು ಉದ್ದಟತನ ತೋರಿದ್ದಾರೆ ಎಂದು ನರೇಂದ್ರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದಕ್ಕೆ, ಎಲ್ಲವನ್ನೂ ಸರಿಪಡಿಸಿಕೊಂಡು ಹೋಗುತ್ತಾರೆ. ಬಿಗ್‌ಬಾಸ್‌ನಂತಹ ದೊಡ್ಡ ಕಾರ್ಯಕ್ರಮ ಅರ್ಧಕ್ಕೆ ನಿಲ್ಲುವುದು ಬೇಡ ಎಂದು ಡಿಕೆಶಿ ಮನವೊಲಿಕೆ ಮಾಡಿದ್ದಾರೆ. ಮನವೊಲಿಕೆಯ ಬೆನ್ನಲ್ಲೇ ನೀವೇ ತೀರ್ಮಾನ ಮಾಡಿ ಎಂದು ಡಿಕೆಶಿಗೆ ನರೇಂದ್ರ ಸ್ವಾಮಿ ಹೇಳಿದ್ದಾರೆ. ಕೊನೆಗೆ ಡಿಕೆಶಿ, ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಗೆ ಕರೆ ಮಾಡಿ ಜಾಲಿವುಡ್ ಸ್ಟುಡಿಯೋದಲ್ಲಿರುವ ಬಿಗ್ ಬಾಸ್ ಜಾಗವನ್ನು ಓಪನ್ ಮಾಡಲು ಸೂಚನೆ ನೀಡಿದ್ದಾರೆ. ಈ ಸೂಚನೆಯಂತೆ ಬಂದ್ ಆಗಿದ್ದ ಬಿಗ್‌ಬಾಸ್ ಮನೆಯನ್ನು ತೆರೆಯಲಾಗಿದ್ದು ಸ್ಪರ್ಧಿಗಳು ಮುಂಜಾನೆ ದೊಡ್ಮನೆ ಪ್ರವೇಶಿಸಿದ್ದಾರೆ.
