March 20, 2026
WhatsApp Image 2025-10-11 at 1.09.00 PM

ಅವಿವಾಹಿತ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದಲ್ಲಿ ನಡೆದಿದೆ.

ತಣ್ಣೀರುಪಂತ ಶಾರದಾ ಉತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಅಳಕ್ಕೆ(40) ಆತ್ಮಹತ್ಯೆ ಮಾಡಿಕೊಂಡವರು. ಗಾರೆ ಕೆಲಸ ಮಾಡುತ್ತಿದ್ದ ಸಂತೋಷ್ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು ತಾಯಿ ಹಾಗೂ ಸಹೋದರಿಯರನ್ನು ಅಗಲಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.