
ಮಂಗಳೂರು ಹೊರವಲಯದ ಕಿನ್ನಿಗೋಳಿ ಎಸ್ ಕೋಡಿ ಬಳಿ ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸವಾರ ಮೃತಪಟ್ಟಿದ್ದಾರೆ.
ಮುಲ್ಕಿ ಪುನರೂರು ಮೊಗೇರ ದೈವಸ್ಥಾನ ಬಳಿ ನಿವಾಸಿ ಸುರೇಂದ್ರ ಮೃತ ಸವಾರ. ಸಹ ಸವಾರ ಸಂದೀಪ್ ಅವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಿನ್ನಿಗೋಳಿ ಎಸ್ ಕೋಡಿಯಿಂದಾಗಿ ಹಳೆಯಂಗಡಿ ಕಡೆಗೆ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸುರೇಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
