ಬಂಟ್ವಾಳ: ಅನ್ಯಕೋಮಿನ ಯುವಕನ ಜೊತೆಯಲ್ಲಿ ಯುವತಿಯೋರ್ವಳು ಬೆಂಗಳೂರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ಧಾಳೆ ಎಂಬ ಕಾರಣಕ್ಕಾಗಿ ಹಿಂದೂ ಸಂಘಟನೆಯ ಕಾರ್ಯಕರ್ತರ ಬಸ್‌ನ್ನು ತಡೆದು ನಿಲ್ಲಿಸಿ, ಪೊಲೀಸರಿಗೆ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.
ಮಂಗಳೂರಿನಿಂದ ಖಾಸಗಿ ಬಸ್ ನಲ್ಲಿ ಅನ್ಯಕೋಮಿನ ಯುವಕನ ಜೊತೆ ಯುವತಿಯೋರ್ವಳು ಪ್ರಯಾಣಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಕಲ್ಲಡ್ಕ ಪ್ರಖಂಡದ ವಿಶ್ವ ಹಿಂದೂ ಪರಿಷತ್ ಭಜರಂಗದಳದ ಕಾರ್ಯಕರ್ತರು ದಾಸಕೋಡಿ ಎಂಬಲ್ಲಿ ಬಸ್ ತಡೆದು ನಿಲ್ಲಿಸಿದ್ದಾರೆ. ಆ ಬಳಿಕ ಬಸ್ ನಲ್ಲಿ ಕಾರ್ಯಕರ್ತರು ಹಾಗೂ ಪ್ರಯಾಣಿಕರ ಮಧ್ಯೆ ಮಾತಿನ ಚಕಮಕಿ ನಡೆದ ವಿಡಿಯೋ ವೈರಲ್ ಆಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿ ಕಾರ್ಯಕರ್ತರು ಹಾಗೂ ಯುವಕ ಹಾಗು ಯುವತಿ ಠಾಣೆಗೆ ತೆರಳಿದ್ದಾರೆ.
ಠಾಣೆಯಲ್ಲಿ ಮಾತುಕತೆ ನಡೆಸಿದ ಬಳಿಕ ಯುವತಿಯನ್ನು ಮನೆಯವರ ಜೊತೆ ಕಳುಹಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.