
ಬ್ರಹ್ಮಾವರದ ಹಿಂದುಳಿದ ವರ್ಗಗಳ ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಮಂಗಳೂರಿನಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ.
ನಿನ್ನೆ (ನ.8) ಬೆಳಗ್ಗೆ ಮೂವರು ವಿದ್ಯಾರ್ಥಿನಿಯರು ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದರು. ತನಿಖೆ ನಡೆಸಿದ ಬ್ರಹ್ಮಾವರ ಪೊಲೀಸರು ಸಿಸಿ ಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಅಲ್ಲದೇ ಮೊಬೈಲ್ ಲೊಕೇಶನ್ ಆಧಾರದ ಮೇಲೆ ವಿದ್ಯಾರ್ಥಿನಿಯರು ಮಂಗಳೂರಿನಲ್ಲಿ ಇರುವುದನ್ನು ಪತ್ತೆ ಹಚ್ಚಿದ್ದಾರೆ.
ಬ್ರಹ್ಮಾವರ ಪೊಲೀಸರು ಪೋಷಕರೊಂದಿಗೆ ಮಂಗಳೂರಿಗೆ ತೆರಳಿದ್ದು, ಅಲ್ಲಿಂದ ಕರೆತರುತ್ತಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಬ್ರಹ್ಮಾವರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ನಾಪತ್ತೆ ಪ್ರಕರಣ ಸುಖಾಂತ್ಯಗೊಂಡಿದೆ
