March 3, 2026
WhatsApp Image 2025-11-13 at 12.33.06 PM

ಬೆಳ್ತಂಗಡಿಯ ಕುತ್ಲೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವುಗೈದ ಕಳ್ಳನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.

ಇತ್ತೆ ಬರ್ಪೆ ಅಬೂಬಕರ್(71) ಬಂಧಿತ ಆರೋಪಿ. ನಾರವಿ ಗ್ರಾಮದ ಕುತ್ಲೂರಿನ ಮಂಜು ಶ್ರೀ ನಗರದ ಶಿಕ್ಷಕ ಅವಿನಾಶ್ ಎಂಬವರ ಮನೆಯಲ್ಲಿ ಅ.2 ರಿಂದ ಅ.6ರ ನಡುವೆ ಮನೆಯಲ್ಲಿ ಯಾರು ಇಲ್ಲದ ವೇಳೆ 9.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿತ್ತು.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.  ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ವೇಣೂರು ಪೊಲೀಸ್ ಠಾಣೆ ಸಬ್ ಇನ್ಸೆಕ್ಟರ್ ಓಮನ ಮತ್ತು ತಂಡ ನ.11 ರಂದು ರಾತ್ರಿ ವೇಣೂರು ಕುಂಭಶ್ರೀ ಬಳಿ ವಾಹನ ತಪಾಸಣೆ ಮಾಡುವ ವೇಳೆ ಅನುಮಾನಾಸ್ಪದವಾಗಿ ಸ್ಕೂಟರ್‌ನಲ್ಲಿ ಬರುತ್ತಿದ್ದ ಇತ್ತೆ ಬರ್ಪೆ ಅಬೂಬಕರ್‌ನನ್ನು ತಡೆದು ನಿಲ್ಲಿಸಿ ವಾಹನದ ದಾಖಲೆ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಹೆಚ್ಚಿನ ವಿಚಾರಣೆಗಾಗಿ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಆರೋಪಿ ಉಡುಪಿ ಜಿಲ್ಲೆಯ ಶಿರ್ವದಲ್ಲಿ ಕಳ್ಳತನ ಮಾಡಿ ಸಿಕ್ಕಿ ಬಿದ್ದು ಎರಡು ತಿಂಗಳು ಜೈಲು ಸೇರಿ ಇತ್ತಿಚೆಗೆ ಹೊರಬಂದಿದ್ದ ಎಂದು ತಿಳಿದು ಬಂದಿದೆ.

About The Author

Leave a Reply

Your email address will not be published. Required fields are marked *

You cannot copy content of this page.