
ಇತ್ತೀಚಿಗೆ ಕಾಲೇಜುಗಳಲ್ಲಿ (College) ಲೈಂಗಿಕ ಕಿರುಕುಳ ( Sexual harassment) ಹೆಚ್ಚುತ್ತಿದ್ದು, ಉಪನ್ಯಾಸಕನೆ ವಿದ್ಯಾರ್ಥಿನಿಗೆ (Student) ತೊಂದರೆ ಕೊಟ್ಟ ಘಟನೆ ನಡೆದಿದೆ. ಇದೀಗ ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಮೈಸೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ ದೂರು ನೀಡಿದ್ದಾರೆ. ವಿದ್ಯಾರ್ಥಿನಿಯ ದೂರು ಆಧರಿಸಿ ಉಪನ್ಯಾಸಕ ಭರತ್ ಭಾರ್ಗವ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಿವಿಧ ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಾಗಿದೆ. ನಿನಗೆ ಹೆಚ್ಚು ಅಂಕ ನೀಡುತ್ತೇನೆ, ಕೆಲಸ ಕೊಡಿಸುತ್ತೇನೆ ಎಂದು ಆಮಿಷವೊಡ್ಡಿ ಹೊರಗಡೆ ಪಬ್ ಗೆ ಹೋಗಿ ಮಜಾ ಮಾಡೋಣ ಬಾ ಎಂದು ಕಿರುಕುಳ ನೀಡಿದ್ದಾರೆ. ಈ ಸಂಬಂಧ ಮಹಿಳಾ ಉಪನ್ಯಾಸಕರಿಗೆ ವಿದ್ಯಾರ್ಥಿನಿ ದೂರು ನೀಡಿದ್ದರು. ದೂರು ನೀಡಿದ್ದಕ್ಕೆ ಉಪನ್ಯಾಸಕ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ನಾನು ಹೇಳಿದಂತೆ ಕೇಳದಿದ್ದರೆ ಫೇಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.ಹೀಗಾಗಿ ಉಪನ್ಯಾಸಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿನಿ ಮನವಿ ಮಾಡಿದ್ದಾರೆ.ಪ್ರಕರಣ ದಾಖಲಿಸಿಕೊಂಡಿರೋ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.ಉಪನ್ಯಾಸಕರನ್ನು ಕೆರೆತಂದು ವಿಚಾರಣೆ ನಡೆಸಿದ್ದಾರೆ.
