ಮದ್ಯ ಕುಡಿದು ಸತ್ತವರಿಗೆ ಯಾವುದೇ ಪರಿಹಾರ ನೀಡುವುದಿಲ್ಲ ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಹಾರದ ಸರನ್ ಜಿಲ್ಲೆಯಲ್ಲಿ ಕಳ್ಳ ಬಟ್ಟಿ ಸೇವಿಸಿ ಸಾವನ್ನಪ್ಪಿದ ಘಟನೆಯನ್ನ ಉಲ್ಲೇಖಿಸಿದರು.ನಾವು ಮನವಿ ಮಾಡುತ್ತಲೇ ಇದ್ದೇವೆ, ಕುಡಿತವು ನಿಮಗೆ ಒಳ್ಳೆಯದನ್ನ ತಂದುಕೊಡಲ್ಲ.
ಆದರೂ ಕುಡಿದು ಸಾಯುತ್ತೀರಿ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಈ ವೇಳೆ ಪ್ರತಿಪಕ್ಷ ನಾಯಕ ವಿಜಯ್ ಸಿನ್ಹಾ ಸಂತ್ರಸ್ತ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಆದ್ರೆ ನಿತೀಶ್, ‘ಮದ್ಯ ಸೇವಿಸಿ ಮೃತಪಟ್ಟಿದ್ದರೆ ಸರ್ಕಾರ ಪರಿಹಾರ ನೀಡಲು ಸಾಧ್ಯವೇ ಇಲ್ಲ. ಒಂದು ಪೈಸೆ ಕೂಡ ಪರಿಹಾರ ನೀಡೋದಿಲ್ಲ’ ಎಂದು ಹೇಳಿದ್ದಾರೆ.
ಬಿಹಾರದ ಛಾಪ್ರಾ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕಳ್ಳಬಟ್ಟಿ ಸೇವಿಸಿ ಸಾವಿಗೀಡಾದವರ ಸಂಖ್ಯೆ 65ಕ್ಕೆ ಏರಿಕೆಯಾಗಿದೆ.