
ಮಣಿಪಾಲ: ಮಣಿಪಾಲದ ಎರಡು ಅಪಾರ್ಟ್ಮೆಂಟ್ ಗೆ ದಾಳಿ ನಡೆಸಿದ ಪೊಲೀಸರು ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿ ಸುಮಾರು 36 ಸಾವಿರ ಮೌಲ್ಯದ 727 ಗ್ರಾಂ ಗಾಂಜಾ ಹಾಗೂ 30 ಸಾವಿರ ರೂ.,ಮೌಲ್ಯದ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.
ಗುಜರಾತ್ ಮೂಲದ ಕುಶ್‌ಕೆಯುಶ್ ಪಟೇಲ್ (20) ಹಾಗೂ ಉತ್ತರ ಪ್ರದೇಶ ಮೂಲದ ದೇವಾಂಶ್ ತ್ಯಾಗಿ (22) ಬಂಧಿತರು.
ಆರೋಪಿಗಳು ಗಾಂಜಾವನ್ನು ಮಣಿಪಾಲದಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಲಾಭ ಗಳಿಸುವ ಉದ್ದೇಶದಿಂದ ಅಪಾರ್ಟ್ಮೆಂಟ್ ಕೊಠಡಿಯಲ್ಲಿ ಶೇಖರಿಸಿ ಇಟ್ಟಿರುವುದು ತನಿಖೆಯಿಂದ ಕಂಡುಬಂದಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
