
ಉಡುಪಿಯ ಕಲ್ಸಂಕ ಜಂಕ್ಷನ್‌ನಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದ್ದು ಇದೀಗ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆಯೆಂದು ಅಧಿಕಾರ ವರ್ಗ ನಂಬಿದೆ. ನವೆಂಬರ್ 29 ರಿಂದ ಹೊಸ ಸಿಗ್ನಲ್ ವ್ಯವಸ್ಥೆ ಕಾರ್ಯಾರಂಭ ಮಾಡಿದೆ.
ಕಲ್ಸಂಕ ಜಂಕ್ಷನ್ ಬಹಳ ಹಿಂದಿನಿಂದಲೂ ತೀವ್ರ ದಟ್ಟಣೆಯನ್ನು ಎದುರಿಸುತ್ತಿದೆ. ನಾಲ್ಕು ದಿಕ್ಕುಗಳಿಂದಲೂ ಭಾರೀ ವಾಹನಗಳ ಸಂಚಾರ ಹೆಚ್ಚಾಗಿ ಸಂಚಾರ ದಟ್ಟಣೆಗೆ ಕಾರಣವಾಗುತ್ತಿತ್ತು ಮತ್ತು ಪ್ರಯಾಣಿಕರು ಟ್ರಾಫಿಕ್ ಜಾಮ್‌ನಿಂದಾಗಿ ಬಳಲಿದ್ದರು. ಸಾರ್ವಜನಿಕರ ನಿರಂತರ ಮನವಿಗಳಿಗೆ ಸ್ಪಂದಿಸಿದ ಉಡುಪಿ ಜಿಲ್ಲಾ ಪೊಲೀಸರು ನಗರಸಭೆಗೆ ಪತ್ರ ಬರೆದಿದ್ದರು. ಈ ಕೋರಿಕೆಯ ಮೇರೆಗೆ, ನಗರಸಭೆ ಅಧಿಕಾರಿಗಳು ವಾಹನ ಸಂಚಾರವನ್ನು ಸುಗಮಗೊಳಿಸಲು ಸಂಚಾರ ಸಿಗ್ನಲ್ ವ್ಯವಸ್ಥೆಯನ್ನು ಸ್ಥಾಪಿಸಿದ್ದಾರೆ.
ಸುಗಮ ಮತ್ತು ಸುರಕ್ಷಿತ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಸಿಗ್ನಲ್ ನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕಾರಿಗಳು ಸಾರ್ವಜನಿಕರನ್ನು ಕೋರಿದ್ದಾರೆ.
