March 18, 2026
WhatsApp Image 2025-12-12 at 6.00.30 PM

ಉಡುಪಿ: ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿಯ ಗಿಡಗಂಟಿಗಳ ನಡುವೆ ಅಪರಿಚಿತ ಗಂಡಸಿನ ಅಸ್ಥಿಪಂಜರ ಪತ್ತೆಯಾಗಿದ್ದು ಮಾಹಿತಿ ಪಡೆದ ವಿಶು ಶೆಟ್ಟಿ ಅಂಬಲಪಾಡಿ ಪೊಲೀಸರ ಸಮಕ್ಷಮ ರಾಮದಾಸ್ ಪಾಲನ್ ಉದ್ಯಾವರ ಸಹಾಯದಿಂದ ಮೃತ ವ್ಯಕ್ತಿಯ ಅಸ್ತಿ ಪಂಜರ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ.

ಅಪರಿಚಿತ ವ್ಯಕ್ತಿ ಕೆಲವು ಸಮಯಗಳ ಹಿಂದೆ ಮೃತಪಟ್ಟಿದ್ದು ಈ ದಿನ ಬೆಳಕಿಗೆ ಬಂದಿದೆ. ಮಾಹಿತಿ ಪಡೆದ ವಿಶು ಶೆಟ್ಟಿ , ಈ ಬಗ್ಗೆ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮೃತ ವ್ಯಕ್ತಿಯ ಪ್ಯಾಂಟ್ ಶರ್ಟ್ ಗುರುತಿಸಿ ನಾಪತ್ತೆಯಾದ ವ್ಯಕ್ತಿಯ ಸಂಬಂಧಿಕರು ಇದ್ದಲ್ಲಿ ನಗರ ಠಾಣೆ ಸಂಪರ್ಕಿಸಬೇಕು ಎಂದು ವಿಶು ಶೆಟ್ಟಿ ವಿನಂತಿಸಿದ್ದಾರೆ. ವ್ಯಕ್ತಿ ಮೃತ ಪಟ್ಟ ಬಗ್ಗೆ ನಿಖರ ಕಾರಣ ಪೊಲೀಸ್ ತನಿಖೆ ಹಾಗೂ ವೈದ್ಯಕೀಯ ಪರೀಕ್ಷೆಯಿಂದ ತಿಳಿಯಬೇಕಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.