March 26, 2026
WhatsApp Image 2025-12-18 at 1.47.33 PM

ಉಡುಪಿ ಜಿಲ್ಲೆಯ ಕೂಡ್ಲು ಫಾಲ್ಸ್ ನಲ್ಲಿನ ಬಂಡೆಯ ಮೇಲಿನಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.

ಉಡುಪಿಯ ಕೊಂಜಾಡಿ ಮೂಲದ ಬೆಂಗಳೂರು ನಿವಾಸಿ ಸವಿತಾ ಪಿ. ಶೆಟ್ಟಿ ಎಂಬವರ ಮಗ ಮನ್ವಿತ್ (25) ಮೃತಪಟ್ಟವರು.  ಮನ್ವಿತ್ ಡಿ.12ರಂದು ಕೊಂಜಾಡಿಯ ಮನೆಗೆ ಬಂದಿದ್ದು, ಅಲ್ಲಿಂದ ಡಿ.14ರಂದು ತನ್ನ ಸ್ನೇಹಿತರೊಂದಿಗೆ ಹೆಬ್ರಿಯ ಕೂಡ್ಲು ಫಾಲ್ಸ್ ಗೆ ಹೋಗಿದ್ದರು. ಅಲ್ಲಿ ಸ್ನೇಹಿತರು ಸ್ನಾನ ಮಾಡುತ್ತಿರುವಾಗ ಮನ್ವಿತ್ ಎತ್ತರದ ಬಂಡೆಯ ಮೇಲೆ ಕುಳಿತುಕೊಂಡಿದ್ದರು.

ಈ ವೇಳೆ ಅವರು ಆಕಸ್ಮಿಕವಾಗಿ ತಲೆ ತಿರುಗಿ ನೀರಿಗೆ ಬಿದ್ದಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.