March 20, 2026
WhatsApp Image 2025-12-21 at 9.22.22 AM

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಠಿಸಿ, ಭಕ್ತರಿಂದ ಮುಂಗಡ ರೂಮ್ ಬುಕಿಂಗ್ ಹೆಸರಿನಲ್ಲಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನದ ಆಲ್ವಾರ್ ಜಿಲ್ಲೆಯ ತಿಜಾರಾ ತಾಲ್ಲೂಕಿನ ದಾಖಾಪುರಿ ನಿವಾಸಿ ನಾಸೀರ್ ಹುಸೇನ್ (21) ಬಂಧಿತ ಆರೋಪಿ.  ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯವರು ನೀಡಿದ ದೂರಿನ ಮೇರೆಗೆ, ಕಳೆದ ನವೆಂಬರ್‌ 3ರಂದು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಹೆಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಬೈಂದೂರು ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ.ಬಿ ಹಾಗೂ ಕುಂದಾಪುರ ಗ್ರಾಮಾಂತರ ವೃತ್ತದ ಸಿಪಿಐ ಸಂತೋಷ ಎ. ಕಾಯ್ಕಿಣಿ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ರಾಜಸ್ಥಾನದಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಲಾಗಿದೆ.

ವಂಚನೆಗೆ ಬಳಸಿದ ಲ್ಯಾಪ್‌ಟಾಪ್ ಅನ್ನು ಪೊಲೀಸರು ಪಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಇಂದು ಬೈಂದೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ವಿಶೇಷ ತನಿಖಾ ತಂಡದಲ್ಲಿ ಕೊಲ್ಲೂರು ಪೊಲೀಸ್ ಠಾಣೆಯ ಪಿಎಸ್‌ಐ ವಿನಯ ಎಂ. ಕೋರ್ಲಹಳ್ಳಿ, ಭೀಮಶಂಕರ ಸಿನ್ನೂರ ಸೇರಿದಂತೆ ಕೊಲ್ಲೂರು ಠಾಣೆಯ ನಾಗೇಂದ್ರ, ಗಂಗೊಳ್ಳಿ ಠಾಣೆಯ ರಾಘವೇಂದ್ರ ಶೆಟ್ಟಿ ಹಾಗೂ ಕೃಷ್ಣ ದೇವಾಡಿಗ ಭಾಗವಹಿಸಿದ್ದರು.

About The Author

Leave a Reply

Your email address will not be published. Required fields are marked *

You cannot copy content of this page.