
ಬಂಟ್ವಾಳ: ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಭಾರೀ ಹಣ ಮತ್ತು ಚಿನ್ನದ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಶಾಖೆಯ ಜಂಟಿ ವ್ಯವಸ್ಥಾಪಕರಾಗಿದ್ದ ಸುಬ್ರಹ್ಮಣ್ಯಂ (30), ಎಟಿಎಂ ಮೇಲ್ವಿಚಾರಣೆಯ ಜವಾಬ್ದಾರಿ ಹೊಂದಿದ್ದ ವ್ಯಕ್ತಿಯೇ ವಂಚನೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ
ದಿನಾಂಕ 06-02-2024 ರಿಂದ 16-12-2025 ರವರೆಗೆ ಎಟಿಎಂಗೆ ನಿಗದಿತ ಪ್ರಮಾಣದ ನಗದು ಜಮಾ ಮಾಡದೇ ಕಡಿಮೆ ಹಣ ಜಮಾ ಮಾಡಿ ಒಟ್ಟು ₹70,86,000 ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಇದಲ್ಲದೆ, 19-12-2025 ರಂದು ಸೇಫ್ ಲಾಕರ್ ಪರಿಶೀಲನೆ ವೇಳೆ 4.400 ಗ್ರಾಂ ಚಿನ್ನ ವಂಚನೆಯಾದುದು ಪತ್ತೆಯಾಗಿದೆ.ಹಣದ ದುರುಪಯೋಗ ಬೆಳಕಿಗೆ ಬರುತ್ತಿದ್ದಂತೆ ಆರೋಪಿತನು 17-12-2025 ರಂದು ಯಾರಿಗೂ ಮಾಹಿತಿ ನೀಡದೇ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ. ಒಟ್ಟು ವಂಚನೆಯ ಮೌಲ್ಯ ₹71,41,000 ಆಗಿದೆ.
ಈ ಕುರಿತು ಬ್ಯಾಂಕ್ ಆಫ್ ಬರೋಡಾ ಪ್ರಾದೇಶಿಕ ವ್ಯವಸ್ಥಾಪಕರಾದ ಸಿ.ವಿ.ಎಸ್. ಚಂದ್ರಶೇಖರ್ (50) ಅವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 121/2025 ಅಡಿಯಲ್ಲಿ BNS–2023 ಕಲಂ 314, 316(5), 318(2) ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
