March 4, 2026
WhatsApp Image 2026-01-12 at 2.58.07 PM

ಮಂಗಳೂರು : ಬಡಗಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಬ್ರಹ್ಮಕಲಶೋತ್ಸವದ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಭುವನೇಶ್ ಪಚಿನಡ್ಕ ರವರ ನೇತೃತ್ವದಲ್ಲಿ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು.

ದೇವಸ್ಥಾನದ ಸ್ಥಾಪಕ ದಿ. ಸದಾಶಿವ ಎಂ. ಕರ್ಕೇರವರ ಧರ್ಮಪತ್ನಿ ಶಾರದಾ ಎಂ. ಕರ್ಕೇರ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಪಲ್ಲಿಪಾಡಿ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಧ್ಯಕ್ಷ ಉಮೇಶ್ ಸಾಲಿಯಾನ್ ಬೆಂಜನಪದವು, ಪುರೋಹಿತ ಗುರುಪ್ರಸಾದ್ ಉಡುಪರು ಶರಣ, ಅರ್ಚಕ ರಮೇಶ್ ಪೂಜಾರಿ, ಶ್ರೀ ಆದಿಶಕ್ತಿ ಚಾಮುಂಡೆಶ್ವರಿ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ ಹಾಗೂ ಸದಸ್ಯರು, ಜೀರ್ಣೋದ್ಧಾರ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಸರ್ವ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *

You cannot copy content of this page.