April 27, 2026
WhatsApp Image 2026-01-16 at 1.42.21 PM

ಕಾರ್ಕಳ: ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾದ ಘಟನೆ ಕಾರ್ಕಳದ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ಸಂಭವಿಸಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ.

ಮುದ್ದಣ್ಣ ನಗರದ ವಾರಿಜಾ ಎಂಬವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಪೀಠೋಪಕರಣ, ವಾಷಿಂಗ್ ಮಷೀನ್, ಪಾತ್ರೆಗಳು ಹಾಗೂ ವಿದ್ಯುತ್ ಉಪಕರಣಗಳು ಸಂಪೂರ್ಣ ಹಾನಿಗೊಂಡಿವೆ.

ಮನೆಯ ಹೊರಪಾರ್ಶ್ವದಲ್ಲಿ ಸ್ಫೋಟ ಸಂಭವಿಸಿದ್ದರಿ0ದ ಯಾರಿಗೂ ಹಾನಿಯಾಗಿಲ್ಲ. ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ಸುಮಾರು 3 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ

About The Author

Leave a Reply

Your email address will not be published. Required fields are marked *

You cannot copy content of this page.