March 20, 2026
WhatsApp Image 2026-01-18 at 9.27.56 AM

ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಮತ್ತು ಹೆಗ್ಗಡೆಯವರ ಕುಟುಂಬದ ವಿರುದ್ಧ ನಿಂದನೆ ಮಾಡಬಾರದು ಎಂಬ ನ್ಯಾಯಾಲಯದ ಆದೇಶವನ್ನು ಪದೇ ಪದೇ ಉಲ್ಲಂಘಿಸಿದ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಸೌಜನ್ಯ ಮಾವ ವಿಠಲ ಗೌಡ ಅವರಿಗೆ 30 ದಿನಗಳ ಸಿವಿಲ್ ಬಂಧನ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಪ್ರಕರಣದ ಆರೋಪಿಯಾಗಿರುವ ಸೌಜನ್ಯಳ ಮಾವ ವಿಠ್ಠಲ ಗೌಡಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ.ವೀರೇಂದ್ರ ಹೆಗ್ಗಡೆ ಹಾಗೂ ಹೆಗ್ಗಡೆಯವರ ಕುಟುಂಬದ ಅವಹೇಳನಕಾರಿಯಾಗಿ ಮಾತನಾಡದಂತೆ ಪ್ರತಿಬಂಧಕ ಆಜ್ಞೆಯನ್ನು ನ್ಯಾಯಾಲಯ ನೀಡಿತ್ತು. ಈ ಅದೇಶವನ್ನು ಅವರು ಉಲ್ಲಂಘಿಸಿದ್ದು ಈ ಬಗ್ಗೆ ಧರ್ಮಸ್ಥಳ ಪರವಾಗಿ ಶೀನಪ್ಪ ದೂರು ನೀಡಿದ್ದರು.

ವಿಚಾರಣೆಯಲ್ಲಿ ನ್ಯಾಯಾಲಯದ ಇಂಜಕ್ಷನ್ ಆದೇಶ ಇದ್ದರೂ ಆರೋಪಿತರು ಅದನ್ನು ಉಲ್ಕಂಘಿಸಿ ಮತ್ತೆ ಹೇಳಿಕೆಗಳನ್ನು ನೀಡಿರುವುದು ನ್ಯಾಯಾಲಯದ ಗಮನಕ್ಕೆ ಬಂದಿದ್ದು ಇದು ನ್ಯಾಯಾಲಯದ ಆದೇಶಕ್ಕೆ ಮಾಡಿರುವ ಅವಮಾನವಾಗಿದೆ. ಈ ಹಿನ್ನೆಲೆಯಲ್ಲಿ ವಿಠ್ಠಲ ಗೌಡ ಅವರಿಗೆ 30 ದಿನಗಳ ಸಿವಿಲ್ ಕಾರಾಗೃಹ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಪರ ಖ್ಯಾತ ನ್ಯಾಯವಾದಿ ರಾಜಶೇಖರ್ ಹಿಲ್ಯಾರ್ ವಾದ ಮಂಡನೆ ಮಾಡಿದರು.

About The Author

Leave a Reply

Your email address will not be published. Required fields are marked *

You cannot copy content of this page.