
ಬಂಟ್ವಾಳ: ಮಡಂತ್ಯಾರು ಎಂಬಲ್ಲಿ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.ಕಾವಳಮೂಡೂರು ಕಾರಿಂಜ ಪಾಡಿ ನಿವಾಸಿ ಪದ್ಮನಾಭ ದೇವಾಡಿಗ (45) ಮೃತಪಟ್ಟ ವ್ಯಕ್ತಿ.
ಪದ್ಮನಾಭ ಅವರು ಉಪ್ಪಿನಂಗಡಿ ಹೋಟೆಲ್ ಒಂದರಲ್ಲಿ ಸಪ್ಲಾಯರ್ ಕೆಲಸ ಮಾಡುತ್ತಿದ್ದು, ಮೂರು ದಿನಕ್ಕೊಮ್ಮೆ ಮನೆಗೆ ಬರುತ್ತಿದ್ದರು ಎನ್ನಲಾಗಿದೆ. ಜ.23 ರಂದು ರಾತ್ರಿ ಹೋಟೆಲ್ ನಲ್ಲಿ ಕೆಲಸ ಮುಗಿಸಿ ಸುಮಾರು 11.30 ರ ವೇಳೆ ಬರುತ್ತಿದ್ದಾಗ ಪುಂಜಾಲಕಟ್ಟೆ ಹಾಗೂ ಮಡಂತ್ಯಾರು ಮಧ್ಯ ಭಾಗದಲ್ಲಿ ಮಂಗಳೂರು ಏರ್ ಪೋರ್ಟ್ ನಿಂದ ಬರುತ್ತಿದ್ದ ಸಂದರ್ಭದಲ್ಲಿ ಇಗ್ನಿಸ್ ಕಾರು ಡಿಕ್ಕಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತರು ಪತ್ನಿ ಹಾಗೂ ಒಂದು ಗಂಡು ಮತ್ತು ಹೆಣ್ಣು ಮಗಳ ಜೊತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.
